ರಾಜ್ಯದ ವಿವಿಧೆಡೆ ಈಗಾಗಲೇ ಮುಂಗಾರು ಪೂರ್ವ ಮಳೆ ಶುರುವಾಗಿದೆ. ರಾಜ್ಯದ ಹಲವಡೆ ಗುರುವಾರ ಭಾರಿ ಮಳೆಯಾಗಿದ್ದು, ಇನ್ನೂ ಎರಡು ದಿನ ಗುಡುಗು-ಮಿಂಚು ಸಹಿತ ಮಳೆ ಬೀಳುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಇದನ್ನು ಓದಿ: ಖ್ಯಾತ ನಟಿ ಪವಿತ್ರಾ ಲೋಕೇಶ್ ಮಕ್ಕಳ ತಂದೆ ಇವರಲ್ಲ..!
ಹೌದು, ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು, ರಾಮನಗರ, ಹಾಸನ, ಹಾವೇರಿ, ಧಾರವಾಡದಲ್ಲಿ ಮಳೆಯಾಗಿದೆ. ಕೋಲಾರದ ಹಲವೆಡೆ ಆಲಿಕಲ್ಲು ಮಳೆಯಾಗಿದ್ದು, ಹಾವೇರಿಯ ಶಿಗ್ಗಾಂವಿಯಲ್ಲಿ ಓರ್ವ ಸಿಡಿಲಿನ ಆಘಾತಕ್ಕೆ ಮೃತಪಟ್ಟಿದ್ದಾನೆ. ಹಲವೆಡೆ ಗಾಳಿ- ಮಳೆಗೆ ಮನೆಗಳಿಗೆ ಹಾನಿಯಾಗಿದೆ ಎಂದು ವರದಿಯಾಗಿದೆ.
ಇದನ್ನು ಓದಿ: ಭರ್ಜರಿ ಗುಡ್ ನ್ಯೂಸ್: ನಿಮ್ಮ ಖಾತೆಗೆ ಹಣ, ಈಗಲೇ ಚೆಕ್ ಮಾಡಿ
ಇನ್ನುಳಿದಂತೆ ರಾಜ್ಯದ ಹಲವು ಭಾಗಗಳಲ್ಲಿ ಎಂದಿನಂತೆ ಬೆಳಗಿನ ಜಾವ ಸ್ವಲ್ಪ ಚಳಿ ಇರಲಿದ್ದು, ಮಧ್ಯಾಹ್ನದ ಹೊತ್ತಿಗೆ ಸೂರ್ಯನ ತಾಪಮಾನ ಏರಿಕೆಯಾಗಲಿದ್ದು, ಶಖೆ ಹೆಚ್ಚಾಗಲಿದೆ. ಬಳಿಕ ಸಂಜೆ ವೇಳೆ ಮತ್ತೆ ತುಂತುರು ಮಳೆಯಾಗುವ ಸಂಭವವಿದೆ ಹವಾಮಾನ ಇಲಾಖೆ ತಿಳಿಸಿದೆ.
ಇನ್ನು, ಬೆಂಗಳೂರಿನಲ್ಲಿ ಇಂದು ಗರಿಷ್ಟ ಉಷ್ಣಾಂಶ 34 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಟ ಉಷ್ಣಾಂಶ 18 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಯಾದಗಿರಿ ಮತ್ತು ಕಲಬುರಗಿ ಜಿಲ್ಲೆಯಲ್ಲಿ ಗರಿಷ್ಟ ಉಷ್ಣಾಂಶ 40 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಟ ಉಷ್ಣಾಂಶ 23 ಡಿಗ್ರಿ ಸೆಲ್ಸಿಯಸ್ ಇರಲಿದೆ.