ಆಹಾರ ಸಂಸ್ಕರಣೆ ಉದ್ದಿಮೆದಾರರಿಗೆ ಸುವರ್ಣಾವಕಾಶ : ಸಹಾಯಧನ ಶೇ.50ಕ್ಕೆ ಏರಿಕೆ

ದಾವಣಗೆರೆ ಜ.28: ಆತ್ಮ ನಿರ್ಭರ ಭಾರತ ಅಭಿಯಾನದಡಿ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ‘ಒಂದು ಜಿಲ್ಲೆ ಒಂದು ಉತ್ಪನ್ನ’ (ಪಿಎಂಎಫ್‍ಎಂಇ) ಯೋಜನೆಯಡಿ ದಾವಣಗೆರೆ ಜಿಲ್ಲೆಗೆ ಸಿರಿಧಾನ್ಯ ಬೆಳೆಗಳು ಆಯ್ಕೆಯಾಗಿದ್ದು, ಜಿಲ್ಲೆಯಲ್ಲಿ ಹೊಸದಾಗಿ ಸ್ಥಾಪಿಸುವ ಸಿರಿಧಾನ್ಯ…

ದಾವಣಗೆರೆ ಜ.28: ಆತ್ಮ ನಿರ್ಭರ ಭಾರತ ಅಭಿಯಾನದಡಿ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ‘ಒಂದು ಜಿಲ್ಲೆ ಒಂದು ಉತ್ಪನ್ನ’ (ಪಿಎಂಎಫ್‍ಎಂಇ) ಯೋಜನೆಯಡಿ ದಾವಣಗೆರೆ ಜಿಲ್ಲೆಗೆ ಸಿರಿಧಾನ್ಯ ಬೆಳೆಗಳು ಆಯ್ಕೆಯಾಗಿದ್ದು, ಜಿಲ್ಲೆಯಲ್ಲಿ ಹೊಸದಾಗಿ ಸ್ಥಾಪಿಸುವ ಸಿರಿಧಾನ್ಯ ಆಧಾರಿತ ಸಂಸ್ಕರಣಾ ಘಟಕಗಳು ಹಾಗೂ ಹಾಲಿ ಕಾರ್ಯನಿರ್ವಹಿಸುತ್ತಿರುವ ಇತರೆ ಅಸಂಘಟಿತ ಕಿರು ಆಹಾರ ಸಂಸ್ಕರಣ ಉದ್ದಿಮೆಗಳ ಉನ್ನತೀಕರಣ ಹಾಗೂ ವಿಸ್ತರಣೆಗೆ ಈ ಯೋಜನೆಯು ಅತ್ಯುತ್ತಮ ಅವಕಾಶವನ್ನು ಕಲ್ಪಿಸುತ್ತದೆ.

ಯೋಜನೆಯಡಿ ಕಿರು ಆಹಾರ ಸಂಸ್ಕರಣ ಉದ್ದಿಮೆಗಳಿಗೆ ಬೆಂಬಲ ನೀಡಲು ಕೇಂದ್ರ ಸರ್ಕಾರದಿಂದ ಶೇ.35 ರಷ್ಟು ಸಾಲ ಸಂಪರ್ಕಿತ ಸಹಾಯಧನವನ್ನು ನೀಡಲಾಗುತ್ತಿದ್ದು, ಈ ಯೋಜನೆಗೆ ರಾಜ್ಯ ಸರ್ಕಾರವು ಇನ್ನೂ ಹೆಚ್ಚಿನ ಒತ್ತು ನೀಡಬೇಕೆಂಬ ಉದ್ದೇಶದಿಂದ ಕೇಂದ್ರ ಸರ್ಕಾರದ ಶೇ.35ರಷ್ಟು ಸಹಾಯಧನದ ಜೊತೆಗೆ ಶೇ.15 ರಷ್ಟು ಹೆಚ್ಚುವರಿ ಸಹಾಯಧನವನ್ನು ನೀಡಲು ಪರಿಷ್ಕøತ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದೆ. ಹೀಗಾಗಿ ಪ್ರಸ್ತುತ ಯೋಜನೆಯಡಿಯಲ್ಲಿ ಕಿರು ಆಹಾರ ಉದ್ಯಮಗಳನ್ನು ಸ್ಥಾಪಿಸಲು ಇಚ್ಚಿಸುವ ಅರ್ಹ ಫಲಾನುಭವಿಗಳಿಗೆ ಸಾಲ ಸಂಪರ್ಕಿತ ಸಹಾಯಧನ ಶೇ.50 ಕ್ಕೆ ಏರಿಕೆಯಾದಂತಾಗಿದೆ.

ಆಹಾರ ಸಂಸ್ಕರಣೆಯಲ್ಲಿ ಆಸಕ್ತಿಯಿರುವ ವೈಯಕ್ತಿಕ ಕಿರು ಆಹಾರ ಸಂಸ್ಕರಣಾ ಘಟಕಗಳು, ರೈತ ಉತ್ಪಾದಕ ಕಂಪನಿಗಳು, ಸ್ವ ಸಹಾಯ ಸಂಘಗಳು, ಸಹಕಾರ ಸಂಘಗಳು ಈ ಯೋಜನೆಯಲ್ಲಿ ಪಾಲ್ಗೊಳ್ಳಲು ಅವಕಾಶವಿದ್ದು, ಯೋಜನೆಯಡಿ ಅರ್ಜಿ ಸಲ್ಲಿಸಲು ಕೇಂದ್ರ ಸರ್ಕಾರದ ಆಹಾರ ಸಂಸ್ಕರಣಾ ಕೈಗಾರಿಕೆಗಳ ಮಂತ್ರಾಲಯ (ಪಿಎಂಎಫ್‍ಎಂಇ) ಪೋರ್ಟಲ್‍ನಲ್ಲಿ ನೋಂದಾಯಿಸಿಕೊಂಡು ಅರ್ಜಿ ಸಲ್ಲಿಸಬಹುದಾಗಿದೆ.

Vijayaprabha Mobile App free

ಹೆಚ್ಚಿನ ಮಾಹಿತಿಗಾಗಿ ಸಹಾಯಕ ಕೃಷಿ ನಿರ್ದೇಶಕರು, ವಿಷಯ ತಜ್ಞರ ಮೊಬೈಲ್ ಸಂಖ್ಯೆ 8277931105 ಅಥವಾ ಹತ್ತಿರದ ರೈತ ಸಂಪರ್ಕ ಕೇಂದ್ರ ಅಥವಾ ಸಹಾಯಕ ಕೃಷಿ ನಿರ್ದೇಶಕರ ಕಛೇರಿಯನ್ನು ಸಂಪರ್ಕಿಸಬಹುದು ಎಂದು ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.