ಬೆಳಗಾವಿ: ರಾಜ್ಯದ ಬಿಪಿಎಲ್ ಕಾರ್ಡುದಾರರಿಗೆ ಗುಡ್ ನ್ಯೂಸ್ ನೀಡಿರುವ ನೂತನ ಆಹಾರ ಮತ್ತು ನಾಗರೀಕ ಸರಬರಾಜು ಸಚಿವ ಉಮೇಶ್ ಕತ್ತಿ ಅವರು ಏಪ್ರಿಲ್ 1ರಿಂದಲೇ ಅಕ್ಕಿ ಜೊತೆಗೆ ಜೋಳ, ರಾಗಿ, ಹೆಸರುಬೇಳೆ, ತೊಗರಿಬೇಳೆ ವಿತರಣೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.
ಈ ಸಂಬಂಧ ಬೆಳಗಾವಿಯಲ್ಲಿ ಮಾತನಾಡಿದ ಸಚಿವ ಉಮೇಶ್ ಕತ್ತಿ ಅವರು, ಆಹಾರ ಭದ್ರತಾ ಯೋಜನೆಯಡಿ ಉತ್ತರ ಕರ್ನಾಟಕ ಭಾಗದ ಪಡಿತರದಾರರಿಗೆ ಅಕ್ಕಿ ಜೊತೆಗೆ ಜೋಳ, ತೊಗರಿ ಮತ್ತು ಹೆಸರುಬೇಳೆ ವಿತರಿಸಿದರೆ, ದಕ್ಷಿಣ ಕರ್ನಾಟಕ ಭಾಗದ ಪಡಿತರದಾರರಿಗೆ ಅಕ್ಕಿಯ ಜೊತೆಗೆ ರಾಗಿ, ಹೆಸರು, ತೊಗರಿ ವಿತರಿಸಬೇಕು ಎಂಬ ಯೋಜನೆ ಹಾಕಿದ್ದೇವೆ ಎಂದು ಹೇಳಿದ್ದಾರೆ.
ಇದನ್ನು ಓದಿ: ಅನ್ನದಾತರಿಗೆ ಮತ್ತೊಂದು ಸಿಹಿಸುದ್ದಿ: ಕೇಂದ್ರದಿಂದ ಪಿಎಂ ಕಿಸಾನ್ ಮನ್ ಧನ್ ಯೋಜನೆಯಡಿ ರೈತರಿಗೆ ತಿಂಗಳಿಗೆ 3000 ರೂ!