ಚೆನ್ನೈ : ಮದ್ರಾಸ್ ಹೈಕೋರ್ಟ್ ಇಂದು ಮಹತ್ವದ ತೀರ್ಪೊಂದನ್ನು ನೀಡಿದ್ದು, ಒಂದು ಗಂಡು ಮತ್ತು ಹೆಣ್ಣು ಒಂದು ರೂಮಿನಲ್ಲಿದ್ದಾರೆ ಎಂದಾದರೆ ಅವರ ಮೇಲೆ ಅನೈತಿಕ ಸಂಬಂಧದ ಆರೋಪ ಹೊರಿಸುವುದು ತರವಲ್ಲ ಎಂದಿದೆ.
ತಮಿಳುನಾಡು ಮೂಲದ ಸೇನಾ ಪೇದೆ ಕೆ.ಸರವಣ ಬಾಬು ಎಂಬುವವರು ಒಂದೇ ಕೊಠಡಿಯಲ್ಲಿ ಮಹಿಳಾ ಪೇದೆಯೊಂದಿಗೆ ಸಿಕ್ಕಿಬಿದ್ದಿದ್ದರು. ಪರಿಣಾಮ ಪೇದೆಯನ್ನು 1998ರಲ್ಲಿ ಕರ್ತವ್ಯದಿಂದ ವಜಾಗೊಳಿಸಲಾಗಿತ್ತು. ಈ ಸಂಬಂಧ ಪೇದೆ ಕೋರ್ಟ್ ಮೆಟ್ಟಿಲೇರಿದ್ದರು. ಈ ಹಿನ್ನೆಲೆಯಲ್ಲಿ ನ್ಯಾಯಾಲಯ ಸಮಾಜದಲ್ಲಿ ಚಾಲ್ತಿಯಲ್ಲಿರುವ ಈ ರೀತಿಯ ಊಹೆಗಳಿಗೆ ಶಿಸ್ತು ಕ್ರಮ ಜರುಗಿಸಲು ಮತ್ತು ಶಿಕ್ಷೆಯನ್ನು ವಿಧಿಸಲು ಆಧಾರವಾಗಿರಲು ಸಾಧ್ಯವಿಲ್ಲ” ಎಂದು ಐತಿಹಾಸಿಕ ತೀರ್ಪು ನೀಡಿದೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.



