ಬೆಂಗಳೂರು : ರಾಜ್ಯದಲ್ಲಿ ಹಿಜಾಬ್ ವಿವಾದ ಸಂಬಂಧ ಸಲ್ಲಿಕೆಯಾಗಿರುವ ಅರ್ಜಿಗಳ ವಿಚಾರಣೆ ಇಂದು ಮಧ್ಯಾಹ್ನ 2:30ಕ್ಕೆ ಮತ್ತೆ ಹೈಕೋರ್ಟ್ ನಲ್ಲಿ ವಿಚಾರಣೆಗೆ ಬರಲಿದೆ.
ಹೌದು, ಹಿಜಾಬ್ ವಿವಾದ ಸಂಬಂಧ ಎರಡು ದಿನಗಳಿಂದ ಅರ್ಜಿದಾರರು ಹಾಗು ಸರ್ಕಾರದ ಪರ ವಾದ -ಪ್ರತಿವಾದ ಅಲಿಸಿದ ಏಕ ಸದಸ್ಯರ ಪೀಠ, ಇದು ಅಂತ್ಯಂತ ಸೂಕ್ಷ್ಮ ವಿಚಾರ ಆಗಿರುವುದರಿಂದ ವಿಸ್ಕೃತ ಪೀಠದಲ್ಲಿ ವಿಚಾರಣೆ ನಡೆಸುವಂತೆ ಶಿಫಾರಸ್ಸು ಮಾಡಿ ಪ್ರಕರಣವನ್ನು ಮುಖ್ಯ ನ್ಯಾಯಮೂರ್ತಿಗಳಿಗೆ ವರ್ಗಾಯಿಸಿತ್ತು.
ಅದರಂತೆ ಈ ವಿಚಾರವನ್ನು, ಇಂದು ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಟಿ, ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಮತ್ತು ನ್ಯಾಯಮೂರ್ತಿ ಜೆ. ಎಂ.ಖಾಜಿ ಅವರಿರುವ ವಿಸ್ತೃತ ಪೀಠದಲ್ಲಿ ಹಿಜಾಬ್ ವಿವಾದಕ್ಕೆ ಸಂಬಂಧಿಸಿದಂತೆ ಸಲ್ಲಿಕೆಯಾಗಿರುವ ಪ್ರತ್ಯೇಕ ಐದು ಅರ್ಜಿಗಳ ವಿಚಾರಣೆ ನಡೆಯಲಿದ್ದು, ತೀರ್ಪು ಹೊರಬೀಳುವ ಸಾಧ್ಯತೆಯಿದೆ.