ರಾಜ್ಯದಲ್ಲಿ ಕರಾವಳಿ ಮತ್ತು ಮಲೆನಾಡಿನ ಕೆಲವು ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಕೊಡಗಿನಲ್ಲಿ ಅತಿ ಹೆಚ್ಚು ಮಳೆ ಬೀಳುವ ಸಾಧ್ಯತೆ ಇರುವುದರಿಂದ ಹವಾಮಾನ ಇಲಾಖೆ ಇಂದು ಮತ್ತು ನಾಳೆ ರೆಡ್ ಅಲರ್ಟ್ ಘೋಷಿಸಿದೆ.
ಬೆಳಗಾವಿ, ಧಾರವಾಡ, ಗದಗ, ಶಿವಮೊಗ್ಗ, ಹಾಸನದಲ್ಲಿ ಮುಂದಿನ 24 ಗಂಟೆ ಆರೆಂಜ್ ಅಲರ್ಟ್ ಇರಲಿದೆ. ಅಲ್ಲದೆ, ಈ ಜಿಲ್ಲೆಗಳು ಸೇರಿದಂತೆ ಬೀದರ್, ಕಲಬುರಗಿ, ಯಾದಗಿರಿಯಲ್ಲಿ ನಾಳೆ ಯೆಲ್ಲೋ ಅಲರ್ಟ್ ಇರಲಿದೆ.
ಇನ್ನು, ಗುರುವಾರ ವರುಣಾರ್ಭಟ ಮುಂದುವರೆದಿತ್ತು. ರಸ್ತೆಗಳ ಮೇಲೆಲ್ಲ ನೀರು ಹರಿಯುತ್ತಿದ್ದು, ಸೇತುವೆಗಳು ಮುಳುಗುವಷ್ಟು ಮಳೆ ಆಗಿದೆ. ಮೈಸೂರು, ಮಂಡ್ಯ, ಚಾಮರಾಜನಗರ, ಮಡಿಕೇರಿ, ಹಾಸನ, ತುಮಕೂರು, ಶಿವಮೊಗ್ಗ, ರಾಮನಗರ, ಬೆಂಗಳೂರಿನಲ್ಲೂ ಧಾರಾಕಾರ ಮಳೆ ಸುರಿದಿದೆ.
ರಾಜ್ಯದ 20 ಜಿಲ್ಲೆಗಳಿಗೆ ಹವಾಮಾನ ಇಲಾಖೆ ಮುನ್ನೆಚ್ಚರಿಕೆ:
ರಾಜ್ಯಾಧ್ಯಂತ ಮುಂದಿನ 3 ಗಂಟೆಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಮಳೆಯಿಂದಾಗಿ ಆಗಬಹುದಾಗ ನಷ್ಟಗಳಬಗ್ಗೆ ಮುಂಜಾಗೃತಾ ಕ್ರಮಗಳನ್ನು ತೆಗೆದುಕೊಳ್ಳುವಂತೆ 20 ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ ಹವಾಮಾನ ಇಲಾಖೆ ಸೂಚನೆ ನೀಡಿದೆ.
ಹೌದು, ದಕ್ಷಿಣ ಕನ್ನಡ, ಉಡುಪಿ, ಚಾಮರಾಜನಗರ, ಮಂಡ್ಯ, ಮೈಸೂರು, ಕೊಡಗು, ಚಿಕ್ಕಮಗಳೂರು, ಹಾಸನ, ಚಿತ್ರದುರ್ಗ, ತುಮಕೂರು, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ರಾಮನಗರ, ಚಿಕ್ಕಬಳ್ಳಾಪುರ, ರಾಯಚೂರು, ಕಲಬುರ್ಗಿ, ಬೀದರ್ ಹಾಗೂ ಕೊಪ್ಪಳ ಜಿಲ್ಲೆಯ ಡಿಸಿಗಳಿಗೆ ಸೂಕ್ತ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ತಿಳಿಸಿದೆ.
ರಾಜ್ಯಾಧ್ಯಂತ ಮುಂದಿನ 3 ಗಂಟೆಗಳ ಕಾಲ ಭಾರೀ ಮಳೆಯಾಗಲಿದ್ದು,ಗಾಳಿ, ಗುಡುಗು, ಮಿಂಚು, ಸಿಡಿಲು ಸಹಿತ ಮಳೆಯಾಗಲಿದೆ. 30 ರಿಂದ 40 ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸಲಿದೆ ಎಂದು ಮುನ್ಸೂಚನೆ ನೀಡಿದೆ.
ವಿವಿಧ ನಗರಗಳ ತಾಪಮಾನ:
ಬೆಂಗಳೂರು: 28-20
ಮಂಗಳೂರು: 28-25
ಶಿವಮೊಗ್ಗ: 27-21
ಬೆಳಗಾವಿ: 26-21
ಮೈಸೂರು: 28-21
ಮಂಡ್ಯ: 29-21
ಕೊಡಗು: 22-18
ರಾಮನಗರ: 31-26
ಹಾಸನ: 26-19
ಚಾಮರಾಜನಗರ: 28-21
ಚಿಕ್ಕಬಳ್ಳಾಪುರ: 29-20
ಕೋಲಾರ: 29-21
ತುಮಕೂರು: 29-21
ಉಡುಪಿ: 28-24
ಕಾರವಾರ: 28-25
ಚಿಕ್ಕಮಗಳೂರು: 24-18
ದಾವಣಗೆರೆ: 28-22
ಚಿತ್ರದುರ್ಗ: 29-21
ಹಾವೇರಿ: 28-22
ಬಳ್ಳಾರಿ :33-24
ಗದಗ: 29-22
ಕೊಪ್ಪಳ:31-23
ರಾಯಚೂರು:34-24
ಯಾದಗಿರಿ:33-24
ವಿಜಯಪುರ:33-24
ಬೀದರ್: 30-22
ಕಲಬುರಗಿ: 33-23
ಬಾಗಲಕೋಟೆ: 32-23 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ.