ಬೆಂಗಳೂರು: ಇಂಧನ ಇಲಾಖೆಯಲ್ಲಿ ಒಡಂಬಡಿಕೆ ಆಧಾರದಲ್ಲಿ ಕೆಲಸ ಮಾಡುತ್ತಿದ್ದ ನೌಕರರನ್ನು ಖಾಯಂಗೊಳಿಸುವಂತೆ ಸಚಿವ ಸುನೀಲ್ ಕುಮಾರ್ ಅವರಿಗೆ ಮನವಿ ಮಾಡಿದ್ದು, ಶೀಘ್ರವೇ ಸಮಸ್ಯೆ ಬಗೆಹರಿಸಲಾಗುವುದು ಎಂದು ಸಚಿವರು ಭರವಸೆ ನೀಡಿದ್ದರು.
ಈ ಬಗ್ಗೆ ನಿನ್ನೆ ಸಭೆ ನಡೆದಿದ್ದು, 15 ದಿನಗಳಲ್ಲಿ ವರದಿ ಕೊಡುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದು, ವರದಿ ನಂತರ ಮುಂದಿನ ತೀರ್ಮಾನ ತೆಗೆದುಕೊಳ್ಳುವುದಾಗಿ ಇಂಧನ ಸಚಿವ ಸುನೀಲ್ ಕುಮಾರ್ ಅವರು ಹೇಳಿದ್ದಾರೆ.
ಒಂದು ವೇಳೆ ಇಂಧನ ಇಲಾಖೆಯಲ್ಲಿ ಒಡಂಬಡಿಕೆ ಆಧಾರದಲ್ಲಿ ಕೆಲಸ ಮಾಡುತ್ತಿದ್ದ ನೌಕರರನ್ನು ಖಾಯಂಗೊಳಿಸಲು ಸರ್ಕಾರ ಅಸ್ತು ಎಂದರೆ ಇದರಿಂದ 3500 ಮಂದಿ ನೌಕರರಿಗೆ ಅನುಕೂಲವಾಗಲಿದೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.