ಕಲಬುರಗಿ: ಕಲಬುರಗಿ ಜಿಲ್ಲೆಯ ನರಿಬೋಳ ಗ್ರಾಮದ ಮಹೇಶ್ (14) ಎಂಬ ಬಾಲಕನ ಶವ ಕೊಳೆತ ಸ್ಥಿತಿಯಲ್ಲಿ ನಿರ್ಮಾಣ ಹಂತದಲ್ಲಿದ್ದ ಬ್ರಿಡ್ಜ್ ಬಳಿಯಲ್ಲಿ ಪತ್ತೆಯಾಗಿದೆ.
ಮಹೇಶ್ ಮೃತ ಬಾಲಕನಾಗಿದ್ದು ಆತನ ಮರ್ಮಾಂಗಕ್ಕೆ ಚಿತ್ರಹಿಂಸೆ ನೀಡಿ ಕೊಲೆ ಮಾಡಿ ಗೋಣಿಚೀಲದಲ್ಲಿ ಹಾಕಿ ಭೀಮಾ ನದಿಗೆ ಎಸೆಯಲಾಗಿದ್ದು, ಮಹೇಶ್ ಇದೇ ನರಿಬೋಳ ಗ್ರಾಮದ ಅನ್ಯ ಕೋಮಿನ ಯುವತಿಯೊಂದಿಗೆ ಸಲುಗೆಯಿಂದಿದ್ದು, ಆಕೆಯನ್ನು ಪ್ರೀತಿಸುತ್ತಿದ್ದ ಎನ್ನಲಾಗಿದೆ.
ಇದೇ ಕಾರಣದಿಂದ ಕೋಪಗೊಂಡಿದ್ದ ಯುವತಿಯ ಕುಟುಂಬಸ್ಥರು ಮಹೇಶ್‌ನನ್ನು ಅಪಹರಿಸಿ ಚಿತ್ರಹಿಂಸೆ ನೀಡಿ ಕೊಲೆ ಮಾಡಿರುವ ಸಾಧ್ಯತೆಗಳಿವೆ ಎಂಬ ಶಂಕೆ ವ್ಯಕ್ತವಾಗಿದೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.