ಬೆಂಗಳೂರು: ದೇಶದ ಉತ್ತರ ಭಾಗದಲ್ಲಿ ಮಾತ್ರವಲ್ಲದೆ, ದಕ್ಷಿಣ ಭಾರತದ ಕೆಲವೆಡೆ ತುಂತುರು ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ.
ಇನ್ನು ಕೇರಳ ಮತ್ತು ರಾಜ್ಯದ ಕರಾವಳಿ ಪ್ರದೇಶಗಳಲ್ಲಿ ಮುಂದಿನ 2 ದಿನಗಳ ಕಾಲ ತುಂತುರು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದ್ದು, ಬಳಿಕ ತಾಪಮಾನದಲ್ಲಿ ಏರಿಕೆಯಾಗುವುದಾಗಿ ಹೇಳಿದೆ.
ಇನ್ನು ರಾಜಧಾನಿ ಬೆಂಗಳೂರಿನಲ್ಲಿ ಇಂದು ಕನಿಷ್ಠ 19 ಡಿಗ್ರಿ ಸೆಲ್ಸಿಯಸ್, ಗರಿಷ್ಠ 34 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದ್ದು, ಬಳ್ಳಾರಿಯಲ್ಲಿ ಕನಿಷ್ಠ 21.0 ಡಿಗ್ರಿ ಸೆಲ್ಸಿಯಸ್, ಗರಿಷ್ಠ 36 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.