ಬೆಂಗಳೂರು: ಕರ್ನಾಟಕ ಪ್ರದೇಶ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಡಿಕೆ ಶಿವಕುಮಾರ್ ಅವರ ನಿವಾಸಕ್ಕೆ ಶುಭ ಶುಕ್ರವಾರ ಹಾಗೂ ಅಮಾವಸ್ಯೆ ದಿನವಾದ ಇಂದು ಭೇಟಿ ನೀಡಿದ ಮೈಲಾರದ ಗೊರವಯ್ಯಾ ಸಿಹಿ ಸುದ್ದಿ ನೀಡಿದ್ದಾರೆ.
ಹೌದು, ಬೆಂಗಳೂರಿನ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರ ನಿವಾಸಕ್ಕೆ ಭೇಟಿ ನೀಡಿದ ಇಬ್ಬರು ಗೊರವಯ್ಯಾಗಳು ತಲಾ 1 ಸಾವಿರ ರೂ. ನೀಡುವಂತೆ ಹೇಳಿದರು. ಗೊರವಯ್ಯಗಳು ಒಂದು ಸಾವಿರ ರೂಪಾಯಿ ನೋಟು ಪಡೆಯುತ್ತಿದ್ದಂತೆ ಮುಂದಿನ ಸಿಎಂ ನೀವೇ ಆಗ್ತಿರಾ ಎಂದು ಹೇಳಿ ಭವಿಷ್ಯ ನುಡಿದು ಆಶೀರ್ವಾದ ನೀಡಿದರು.
ಇನ್ನು, ಈಗಾಗಲೇ ಕಾಂಗ್ರೆಸ್ ಪಕ್ಷದಲ್ಲಿ ಮುಂದಿನ ಮುಖ್ಯಮಂತ್ರಿ ಬಗ್ಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಅವರ ನಡುವೆ ಪೈಪೋಟಿ ನಡೆಯುತ್ತಿದೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.