ಬೆಂಗಳೂರು: ರಾಜ್ಯದ ಕರಾವಳಿ ಭಾಗ , ಒಳನಾಡಿನ ಜಿಲ್ಲೆಗಳಲ್ಲಿ ಒಟ್ಟು 12 ಜಿಲ್ಲೆಗಳಲ್ಲಿ ಇಂದಿನಿಂದ ಅಕ್ಟೊಬರ್ 13 ರವರೆಗೆ ಗುಡುಗು, ಸಿಡಿಲು ಸಹಿತ ಧಾರಾಕಾರ ಮಳೆಯಾಗುವ ಸಾಧ್ಯತೆ ಇದೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಈಗಾಗಲೇ ಹಲವು ಜಿಲ್ಲೆಗಳಲ್ಲಿ ಬಿಟ್ಟು ಬಿಡದೆ ಮಳೆ ಸುರಿಯುತ್ತಿದ್ದು, ಇನ್ನು ಕೆಲವು ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣವಿದೆ.
ಶಿವಮೊಗ್ಗ, ಕೊಪ್ಪಳ, ಹಾಸನ, ಚಿಕ್ಕಮಗಳೂರು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಹಾವೇರಿ, ಗದಗ, ಧಾರವಾಡ, ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆ ಸೇರಿ ಒಟ್ಟು 12 ಜಿಲ್ಲೆಗಳಲ್ಲಿ ಮುಂದಿನ ಎರಡು ದಿನ ಗುಡುಗು-ಸಿಡಿಲು ಸಹಿತ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆಯಿಂದ ಎಚ್ಚರಿಸಲಾಗಿದೆ.
ರಾಜ್ಯದ ಒಟ್ಟು 12 ಜಿಲ್ಲೆಗಳಲ್ಲಿ ಬಾರಿ ಮಳೆಯಾಗುವ ಸಾಧ್ಯತೆ ಇರುವುದರಿಂದ ಈ ಜಿಲ್ಲೆಗಳಲ್ಲಿ ಹವಾಮಾನ ಇಲಾಖೆಯಿಂದ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.