ರಾಜ್ಯ ಪೊಲೀಸ್ ಇಲಾಖೆಯು ಸಿವಿಲ್ ಕಾನ್‌ಸ್ಟೇಬಲ್ ಹುದ್ದೆ ಭರ್ತಿಗೆ ಅರ್ಜಿ ಸಲ್ಲಿಸುವ ಪ್ರಕ್ರಿಯೆಯನ್ನು ಇಂದಿನಿಂದ ಆರಂಭಿಸಿದೆ. ಹೌದು, ರಾಜ್ಯ ಪೊಲೀಸ್ ಇಲಾಖೆಯು ಸಿವಿಲ್ ಕಾನ್‌ಸ್ಟೇಬಲ್ 1,591 ಹುದ್ದೆ ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಲು ನವಂಬರ್ 21 ಕಡೆ ದಿನವಾಗಿದೆ.
ಇನ್ನು, ಈ ಹುದ್ದೆಗೆ ಕನಿಷ್ಠ 19 ರಿಂದ ಗರಿಷ್ಠ 25 ವರ್ಷ ವಯೋಮಿತಿ ನಿಗದಿಪಡಿಸಲಾಗಿದ್ದು, ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ₹23,500–₹47,650 ವೇತನ ನೀಡಲಾಗುತ್ತದೆ. ಅಭ್ಯರ್ಥಿಗಳನ್ನು ಸ್ಪರ್ಧಾತ್ಮಕ ಪರೀಕ್ಷೆ, ದೈಹಿಕ ಮತ್ತು ವೈದ್ಯಕೀಯ ಪರೀಕ್ಷೆ ಮೂಲಕ ಆಯ್ಕೆ ಮಾಡಲಾಗುತ್ತದೆ. ಹೆಚ್ಚಿನ ಮಾಹಿತಿಗಾಗಿ ಅಧಿಕೃತ ಲಿಂಕ್: https://ksp-recruitment.in/ಮೇಲೆ ಕ್ಲಿಕ್ ಮಾಡಿ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.