ಗ್ರಾಹಕರಿಗೆ ಸರ್ಕಾರ ಗುಡ್ ನ್ಯೂಸ್ ನೀಡಿದ್ದು, ಬೆಲೆ ಏರಿಕೆಯಿಂದ ತತ್ತರಿಸಿದ್ದ ಜನಸಾಮಾನ್ಯರಿಗೆ ಪರಿಹಾರ ನೀಡಲು ಕೇಂದ್ರ ಸರ್ಕಾರ ಕ್ರಮಕ್ಕೆ ಮುಂದಾಗಿದೆ.
ಹೌದು, ಇಂದು ಕೇಂದ್ರ ಆಹಾರ ಸಚಿವಾಲಯವು ಅಡುಗೆ ಎಣ್ಣೆ ತಯಾರಿಕಾ ಕಂಪನಿಗಳು ಮತ್ತು ವ್ಯಾಪಾರ ಸಂಘಗಳೊಂದಿಗೆ ಸಭೆ ನಡೆಸಲಿದ್ದು, ಅಂತಾರಾಷ್ಟ್ರೀಯ ತೈಲ ಬೆಲೆಯಲ್ಲಿ ಇಳಿಕೆಯಾಗಿರುವುದರಿಂದ ಚಿಲ್ಲರೆ ಮಾರುಕಟ್ಟೆಯಲ್ಲಿ ಅಡುಗೆ ಎಣ್ಣೆಗಳ ಬೆಲೆಯನ್ನು ಕಡಿಮೆ ಮಾಡಲು ಆದೇಶ ನೀಡಲಿದೆ ಎನ್ನಲಾಗಿದೆ.
ಇದರಿಂದ ಅಡುಗೆ ಎಣ್ಣೆಗಳಾದ ತಾಳೆ ಎಣ್ಣೆ, ಸೋಯಾಬೀನ್ ಎಣ್ಣೆ, ಸೂರ್ಯಕಾಂತಿ ಎಣ್ಣೆ ಬೆಲೆಗಳು ಇಳಿಕೆಯಾಗಲಿವೆ ಎನ್ನಲಾಗಿದ್ದು, ಬೆಲೆ ಏರಿಕೆಯಿಂದ ತತ್ತರಿಸಿದ್ದ ಜನಸಾಮಾನ್ಯರಿಗೆ ಅನುಕೂಲವಾಗಲಿದೆ
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.