ಸತತ ಏರಿಕೆ ಕಂಡಿದ್ದ ಚಿನ್ನದ ಬೆಲೆ ಕೊಂಚ ಇಳಿಕೆ; ನಿಮ್ಮೂರಲ್ಲಿ ಎಷ್ಟಿದೆ ಚಿನ್ನಾಭರಣದ ಬೆಲೆ

ನಿನ್ನೆ ಏರಿಕೆ ಕಂಡಿದ್ದ ಚಿನ್ನದ ಬೆಲೆಯಲ್ಲಿ (Gold Price) ಚಿನಿವಾರ ಪೇಟೆಯಲ್ಲಿಂದು ಸ್ವಲ್ಪ ಮಟ್ಟಿಗೆ ಇಳಿಕೆಯಾಗಿದೆ. ಹೌದು, 24 ಕ್ಯಾರೆಟ್‌ 10 ಗ್ರಾಂ ಚಿನ್ನದ ಬೆಲೆಯು 160 ರೂ ಇಳಿಕೆಯಾದ್ದು, ಬೆಳ್ಳಿಯ ಬೆಲೆಯಲ್ಲಿ ಇಂದು…

gold silver price

ನಿನ್ನೆ ಏರಿಕೆ ಕಂಡಿದ್ದ ಚಿನ್ನದ ಬೆಲೆಯಲ್ಲಿ (Gold Price) ಚಿನಿವಾರ ಪೇಟೆಯಲ್ಲಿಂದು ಸ್ವಲ್ಪ ಮಟ್ಟಿಗೆ ಇಳಿಕೆಯಾಗಿದೆ. ಹೌದು, 24 ಕ್ಯಾರೆಟ್‌ 10 ಗ್ರಾಂ ಚಿನ್ನದ ಬೆಲೆಯು 160 ರೂ ಇಳಿಕೆಯಾದ್ದು, ಬೆಳ್ಳಿಯ ಬೆಲೆಯಲ್ಲಿ ಇಂದು ಕೂಡ 300 ರೂ ಏರಿಕೆಯಾಗಿದೆ. ಚಿನ್ನ, ಬೆಳ್ಳಿ ಖರೀದಿಸುವ ಪ್ಲಾನ್ ಮಾಡಿದ್ದರೆ ಒಮ್ಮೆ ಬೆಲೆಗಳನ್ನು ಪರಿಶೀಲಿಸಿ ನಂತರ ಖರೀದಿಸಿ.

ಇದನ್ನು ಓದಿ: ಹೈ ಅಲರ್ಟ್: ರಾಜ್ಯದಲ್ಲಿ ಮುಂದಿನ ಮೂರು-ನಾಲ್ಕು ದಿನ ಭಾರೀ ಮಳೆ, ಈ ಜಿಲ್ಲೆಗಳಲ್ಲಿ ಬಿಸಿಲಿನ ತೀವ್ರತೆ ಭಾರೀ ಏರಿಕೆ

ರಾಜ್ಯದಲ್ಲಿ ಚಿನ್ನ, ಬೆಳ್ಳಿ ದರದ ಮಾಹಿತಿ ಹೀಗಿದೆ.

Vijayaprabha Mobile App free

ಹೌದು, ಕರ್ನಾಟಕದಲ್ಲಿ 24 ಕ್ಯಾರೆಟ್‌ 10 ಗ್ರಾಂ ಚಿನ್ನದ ಬೆಲೆಯು 160 ರೂ ಇಳಿಕೆಯಾಗಿ 59,890ರೂ (ನಿನ್ನೆ 60,050)ಗೆ ತಲುಪಿದೆ. ಹಾಗೆಯೇ 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆಯೂ 150 ರೂ ಇಳಿಕೆಯಾಗಿ 54,900ರೂ(ನಿನ್ನೆ 55,050) ಆಗಿದೆ. ಆದರೆ, ಬೆಳ್ಳಿ ಬೆಲೆಯಲ್ಲಿ ಇಂದು ಕೂಡ 300 ರೂ ಏರಿಕೆಯಾಗಿದ್ದು, ಬೆಂಗಳೂರಿನಲ್ಲಿ ಒಂದು ಕೆಜಿ ಬೆಳ್ಳಿ ಬೆಲೆ ರೂ.76,000(ನಿನ್ನೆ ರೂ.75,700) ಆಗಿದೆ.ಇನ್ನು, ರಾಜ್ಯದ ಇತರೆ ಪ್ರಮುಖ ನಗರಗಳಾದ ದಾವಣಗೆರೆ, ಹುಬ್ಬಳ್ಳಿ-ಧಾರವಾಡ, ಮೈಸೂರು ಸೇರಿದಂತೆ ಬಹುತೇಕ ಎಲ್ಲಾ ಜಿಲ್ಲೆಗಳಲ್ಲಿ ಇದೇ ದರಗಳಲ್ಲಿ ಮಾರಾಟವಾಗುತ್ತಿವೆ.

ಇದನ್ನು ಓದಿ: PPF Account: ಸರ್ಕಾರದ ಈ ಯೋಜನೆ ಲಕ್ಷಾಧಿಪತಿಗಳನ್ನಾಗಿಸುತ್ತದೆ; ಹೂಡಿಕೆ ಕಡಿಮೆ, ಬಡ್ಡಿಯೊಂದಿಗೆ ಕೋಟಿಗೂ ಹೆಚ್ಚು ಲಾಭ..!

ದೇಶದ ಇತರೆ ಪ್ರಮುಖ ನಗರಗಲ್ಲಿನ ಚಿನ್ನಬೆಳ್ಳಿ ದರ:

ಹೈದರಾಬಾದ್ ನಲ್ಲಿ 10 ಗ್ರಾಂ 24 ಕ್ಯಾರೆಟ್ ಚಿನ್ನದ ಬೆಲೆ ಮೇಲೆ 160 ರೂಪಾಯಿ ಇಳಿಕೆಯಾದ ನಂತರ 59,840 ರೂಪಾಯಿ ಇದ್ದು, ಒಂದು ಕೆಜಿ ಬೆಳ್ಳಿ ಬೆಲೆಯಲ್ಲಿ 300 ರೂಪಾಯಿ ಏರಿಕೆಯಾಗಿದ್ದು, ಪ್ರಸ್ತುತ 76,000 ರೂಪಾಯಿಗೆ ವ್ಯಾಪಾರ ಆಗುತ್ತಿದೆ.

ಇದನ್ನು ಓದಿ: ಸರ್ಕಾರದಿಂದ ಎಲ್‌ಪಿಜಿ 200 ರೂ ಸಬ್ಸಿಡಿ ಘೋಷಣೆ; ಏನಿದು ಉಜ್ವಲ ಯೋಜನೆ, ಉಚಿತ ಸಂಪರ್ಕ ಪಡೆಯುವುದು ಹೇಗೆ?

ಚೆನ್ನೈನಲ್ಲಿ ಚಿನ್ನದ ಬೆಲೆಯಲ್ಲಿ ವ್ಯತ್ಯಾಸವಿದ್ದು, ಚೆನ್ನೈನಲ್ಲಿ 22 ಕ್ಯಾರೆಟ್ ಆಭರಣ ಚಿನ್ನದ ಬೆಲೆಯಲ್ಲಿ 100 ರೂಪಾಯಿ ಇಳಿಕೆಯಾಗಿ 55,500 ರೂಪಾಯಿಗೆ ತಲುಪಿದ್ದು, 24 ಕ್ಯಾರೆಟ್ ಚಿನ್ನದ ಬೆಲೆಯಲ್ಲಿ 100 ರೂಪಾಯಿ ಕಡಿಮೆಯಾದ ಬಳಿಕ 60,550 ರೂಪಾಯಿ ಇದ್ದು, ಕೆಜಿ ಬೆಳ್ಳಿ 76,000 ರೂಪಾಯಿ ಇದೆ.

ಇದನ್ನು ಓದಿ: ಬೆಂಗಳೂರು ಮೆಟ್ರೋದಲ್ಲಿ ಖಾಯಂ ಉದ್ಯೋಗ; ತಿಂಗಳಿಗೆ 25,000 ರಿಂದ 94500 ರೂ ಸಂಬಳ, ಇಂದೇ ಅರ್ಜಿ ಸಲ್ಲಿಸಿ

ಇನ್ನು, ಮುಂಬೈನಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ 54,850 ರೂಪಾಯಿ ಆಗಿದ್ದರೆ, 24 ಕ್ಯಾರೆಟ್ ಚಿನ್ನದ ಬೆಲೆ 59,840 ರೂಪಾಯಿ ಇದ್ದು, ಬೆಳ್ಳಿ ಬೆಲೆಯಲ್ಲಿ 300 ರೂಪಾಯಿ ಏರಿಕೆಯಾಗಿದ್ದು, ಕೆಜಿ ಬೆಳ್ಳಿ ಬೆಲೆ 73,300 ರೂಪಾಯಿ ಇದ್ದು, ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ 54,950 ರೂ., 24 ಕ್ಯಾರೆಟ್ ಚಿನ್ನದ ಬೆಲೆ 59,990 ರೂಪಾಯಿಯಲ್ಲಿ ವ್ಯಾಪಾರ ಮುಂದುವರೆಯುತ್ತಿದ್ದು, ಬೆಳ್ಳಿ ಬೆಲೆ 73,300 ರೂಪಾಯಿಗೆ ವಹಿವಾಟು ನಡೆಸುತ್ತಿದೆ.

ಇದನ್ನು ಓದಿ: ರಾಷ್ಟ್ರೀಯ ಕುಟುಂಬ ನೆರವು ಯೋಜನೆ; ಈ ಯೋಜನೆಯಡಿ ನಿಮಗೆ ಸಿಗಲಿದೆ 20,000 ರೂ ನೆರವು

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.