ಹೊಸದಿಲ್ಲಿ : ಕೊಲ್ಕತ್ತಾದ ಆರ್‌ಜಿ ಕರ್ ಆಸ್ಪತ್ರೆಯಲ್ಲಿ ವೈದ್ಯೆಯೊಬ್ಬರ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ವಿಚಾರಣೆಯನ್ನು ಇಂದು ಕೈಗೆತ್ತಿಕೊಂಡ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್ ನೇತೃತ್ವದ ತ್ರಿಸದಸ್ಯ ಪೀಠ, ಘಟನೆಯ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿದೆ. ಇನ್ನೂ ಈ ಪ್ರಕರಣದಲ್ಲಿ ಎಫ್‌ಐಆರ್ ದಾಖಲಿಸಲು ವಿಳಂಬವಾಗಿರುವುದನ್ನು ಕೋರ್ಟ್ ಪ್ರಶ್ನಿಸಿದೆ. ರಾತ್ರಿ 8:30 ಕ್ಕೆ ಶವವನ್ನು ಅಂತ್ಯಕ್ರಿಯೆಗಾಗಿ ಪೋಷಕರಿಗೆ ಹಸ್ತಾಂತರಿಸಿದ ಬಳಿಕ ರಾತ್ರಿ 11:45 ಕ್ಕೆ ಎಫ್ಐಆರ್ ದಾಖಲಿಸಲಾಗಿದೆ. ಅಂದ್ರ ಪಶ್ಚಿಮ ಬಂಗಾಳದ ಸರ್ಕಾರದ ಕಾನೂನು ಮತ್ತು ಸುವ್ಯವಸ್ಥೆ ಎಷ್ಟರಮಟ್ಟಿಗೆ ಹದಗೆಟ್ಟಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಇನ್ನು ಯಾಕೆ ಎಫ್‌ಐಆರ್ ತಡವಾಗಿ ದಾಖಲಾಗಿದೆ. ಅಧಿಕಾರಿಗಳು ಏನು ಮಾಡುತ್ತಿದ್ದಾರೆ ಎಂದು ಸಿಜೆಐ ಡಿವೈ ಚಂದ್ರಚೂಡ್ ಪ್ರಶ್ನಿಸಿದ ಪ್ರಸಂಗ ನಡೆಯಿತು.
ಇನ್ನೂ ಈ ಕೇಸ್‌ನ್ನು ಗಂಭೀರವಾಗಿ ಪರಿಗಣಿಸಿದ, ಮುಖ್ಯ ನ್ಯಾಯಮೂರ್ತಿ ಚಂದ್ರಚೂಡ ನೇತೃತ್ವದ ಪೀಠ ಪ್ರಕರಣವನ್ನು ಸ್ವಯಂಪ್ರೇರಿತವಾಗಿ ವಿಚಾರಣೆ ನಡೆಸಿದೆ. ಆಗಸ್ಟ್ 22ರೊಳಗೆ ಸ್ಥಿತಿ ವರದಿಯನ್ನು ಸಲ್ಲಿಸುವಂತೆ ಸಿಬಿಐಗೆ ಕೇಳಿದೆ. ಜೊತೆಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ಕ್ಯಾಬಿನೆಟ್ ಕಾರ್ಯದರ್ಶಿ ಮತ್ತು ಕಾರ್ಯದರ್ಶಿಯನ್ನು ಸದಸ್ಯರನ್ನಾಗಿ ಒಳಗೊಂಡಿರುವ ರಾಷ್ಟ್ರೀಯ ಕಾರ್ಯಪಡೆಯನ್ನು ಸುಪ್ರೀಂ ಕೋರ್ಟ್ ಘೋಷಿಸಿದೆ. ಮೂರು ವಾರಗಳಲ್ಲಿ ಮಧ್ಯಂತರ ವರದಿಯನ್ನು ಮತ್ತು ಎರಡು ತಿಂಗಳಲ್ಲಿ ವಿವರವಾದ ವರದಿಯನ್ನು ಸಲ್ಲಿಸುವಂತೆ ಸುಪ್ರೀಂ ಕೋರ್ಟ್ ರಾಷ್ಟ್ರೀಯ ಕಾರ್ಯ ನಿಧಿಗೆ ಹೇಳಿದೆ. ತಳಮಟ್ಟದಲ್ಲಿ ವಿಷಯಗಳು ಬದಲಾಗಲು ಇನ್ನೊಂದು ಅತ್ಯಾಚಾರ ಪ್ರಕರಣ ಸಂಭವಿಸುವಲ್ಲಿವೆರೆಗೆ ದೇಶ ಕಾಯಲು ಸಾಧ್ಯವಿಲ್ಲ ಎಂದು ಕೋರ್ಟ್ ಹೇಳಿದೆ.