ದುಬೈ : ಐಪಿಎಲ್ 2020 ರ 13 ಆವೃತ್ತಿಯಲ್ಲಿ ದುಬೈ ಇಂಟರ್ನ್ಯಾಷನಲ್ ಕ್ರಿಕೆಟ್ ಸ್ಟೇಡಿಯಂ ನಲ್ಲಿ ನಡೆದ 25ನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು 37 ರನ್ ಗಳ ಭರ್ಜರಿ ಗೆಲುವು ದಾಖಲಿಸಿದೆ.
170 ರನ್ ಗುರಿಯನ್ನು ಬೆನ್ನಟ್ಟಿದ ಚೆನ್ನೈ ಸೂಪರ್ ಕಿಂಗ್ಸ್ 20 ಓವರ್ ಗಳಲ್ಲಿ 8 ವಿಕೆಟ್ ನಷ್ಟದೊಂದಿಗೆ 132 ರನ್ ಗಳಿಸಿ 37 ರನ್ ಗಳಿಂದ ಸೋಲಿಗೆ ಶರಣಾಯಿತು. ಚೆನ್ನೈ ಪರ, ಅಂಬಟಿ ರಾಯುಡು-42, ಜಗದೀಶನ್-33, ರನ್ ಗಳಿಸಿದರು. ಆರ್ ಸಿಬಿ ಪರ, ಕ್ರಿಸ್ ಮಾರಿಸ್ 3, ವಾಷಿಂಗ್ಟನ್ ಸುಂದರ್ 2 ವಿಕೆಟ್, ಉಡಾನ, ಚಾಹಲ್ ತಲಾ 1 ವಿಕೆಟ್ ಪಡೆದು ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದರು.
ಇದಕ್ಕೂ ಮುಂಚೆ ಟಾಸ್ ಗೆದ್ದು ಬ್ಯಾಟಿಂಗ್ ಮಾಡಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಆರಂಭಿಕ ಆಟಗಾರ ದೇವದತ್ ಪಡಿಕ್ಕಲ್ 33, ನಾಯಕ ವಿರಾಟ್ ಕೊಹ್ಲಿ-90, ಶಿವಂ ದುಬೆ-22, ಅವರ ಸಮಯಧಾರಿತ ಆಟದ ನೆರವಿನಿಂದ ನಿಗದಿತ 20 ಓವರ್ ಗಳಲ್ಲಿ 4 ವಿಕೆಟ್ ಕಳೆದುಕೊಂಡು 169 ರನ್ ಗಳಿಸಿತು. ಚೆನ್ನೈ ಸೂಪರ್ ಕಿಂಗ್ಸ್ ಪರ, ಶಾರ್ದುಲ್ ಠಾಕೂರ್ 2 ವಿಕೆಟ್, ದೀಪಕ್ ಚಾಹರ್, ಸ್ಯಾಮ್ ಕರಣ್ ತಲಾ ಒಂದು ವಿಕೆಟ್ ಪಡೆದರು.
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪರ ಅಮೋಘ ಪ್ರದರ್ಶನ ನೀಡಿ ತಂಡದ ಗೆಲುವಿಗೆ ಪ್ರಮುಖ ಕಾರಣರಾದ ನಾಯಕ ವಿರಾಟ್ ಕೊಹ್ಲಿ ಪಂದ್ಯ ಪುರುಷೋತ್ತಮ ಪ್ರಶಸ್ತಿ ಪಡೆದರು.