ಬೆಂಗಳೂರು: ರಾಜ್ಯದಲ್ಲಿ 15 ಸಾವಿರ ಶಿಕ್ಷಕರ ನೇಮಕ ಈ ವರ್ಷವೇ ಪೂರ್ಣಗೊಳ್ಳುತ್ತದೆ ಎಂದು ಶಾಲಾ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರು ಹೇಳಿದ್ದಾರೆ.
ಹೌದು, ಈ ಕುರಿತು ಬೆಂಗಳೂರಿನಲ್ಲಿ ಮಾತನಾಡಿದ ಸಚಿವ ಬಿ.ಸಿ.ನಾಗೇಶ್, ಶಿಕ್ಷಕರ ಹುದ್ದೆ ಭರ್ತಿ ಪ್ರಕ್ರಿಯೆ ಪ್ರಗತಿಯಲ್ಲಿದ್ದು, ಶೀಘ್ರವೇ 1:2 ಅನುಪಾತದಲ್ಲಿ ಅರ್ಹ ಅಭ್ಯರ್ಥಿಗಳ ತಾತ್ಕಾಲಿಕ ಪಟ್ಟಿ ಬಿಡುಗಡೆ ಮಾಡಲಾಗುತ್ತದೆ. ಬಳಿಕ ದಾಖಲೆಗಳ ಪರಿಶೀಲನೆ ಸೇರಿದಂತೆ ಎಲ್ಲಾ ಅರ್ಹತೆಗಳನ್ನು ಪರಿಶೀಲಿಸಿ, ಅಂತಿಮ ಆಯ್ಕೆ ಪಟ್ಟಿ ಪ್ರಕಟಿಸಲಾಗುತ್ತದೆ ಎಂದು ತಿಳಿಸಿದ್ದಾರೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.