ಶಿವಮೊಗ್ಗ: ಬೆಳ್ಳಂಬೆಳಗ್ಗೆಯೇ ಮತ್ತೆ ಲಾಂಗು ಮಚ್ಚು ಬೀಸಲಾಗಿದ್ದು, ಕುಖ್ಯಾತ ರೌಡಿ ಶೀಟರ್ ಹಂದಿ ಅಣ್ಣಿಯನ್ನ ದುಷ್ಕರ್ಮಿಗಳು ಬರ್ಬರವಾಗಿ ಕೊಚ್ಚಿ ಕೊಲೆಗೈದ ಘಟನೆ ಶಿವಮೊಗ್ಗದ ವಿನೋಬನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಹೌದು, ಶಿವಮೊಗ್ಗದ ವಿನೋಬನಗರ ಚೌಕಿ ಬಳಿ ರೌಡಿ ಶೀಟರ್ ಹಂದಿ ಅಣ್ಣಿಯನ್ನ ಹಾಡ ಹಗಲೇ ಕೊಚ್ಚಿ ಕೊಲೆಗೈಯಲಾಗಿದೆ. ಕಾರಿನಲ್ಲಿ ಬಂದ 6 ಮಂದಿ ದುಷ್ಕರ್ಮಿಗಳು ಹಂದಿ ಅಣ್ಣಿಯನ್ನ ನಡುರಸ್ತೆಯಲ್ಲಿ ಕೊಚ್ಚಿ ಕೊಲೆ ಮಾಡಿ, ಬಳಿಕ ಇನೋವಾದಲ್ಲಿ ಪರಾರಿಯಾಗಿದ್ದಾರೆ
ನಗರದಲ್ಲಿ ಹಲವು ಪ್ರಕರಣದಲ್ಲಿ ಭಾಗಿಯಾಗಿದ್ದ ಮೃತ ರೌಡಿ ಶೀಟರ್ ಹಂದಿ ಅಣ್ಣಿ ಕೊಲೆ ನಗರವನ್ನ ಬೆಚ್ಚಿಬೀಳಿಸಿದ್ದು, ಕೊಲೆಗೆ ನಿಖರವಾದ ಮಾಹಿತಿ ಇನ್ನು ತಿಳಿದು ಬಂದಿಲ್ಲ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.