ಶೀಘ್ರದಲ್ಲೇ ಗೋವಧೆ ನಿಷೇಧ ಮಸೂದೆ: ಸಿ.ಟಿ.ರವಿ

ಬೆಂಗಳೂರು: ಮಾಜಿ ಸಚಿವ ಮತ್ತು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ಅವರು ರಾಜ್ಯದಲ್ಲಿ ಗೋವಧೆ ನಿಷೇಧವು ಶೀಘ್ರದಲ್ಲೇ ಜಾರಿಯಾಗಲಿದೆ. ಮುಂಬರುವ ವಿಧಾನಸಭಾ ಅಧಿವೇಶನಗಳಲ್ಲಿ ಗೋವಧೆ ನಿಷೇಧಿಸುವ ಮಸೂದೆಯನ್ನು ಪರಿಚಯಿಸಲಾಗುವುದು ಎಂದು ಹೇಳಿದ್ದಾರೆ.…

c t ravi vijayaprabha

ಬೆಂಗಳೂರು: ಮಾಜಿ ಸಚಿವ ಮತ್ತು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ಅವರು ರಾಜ್ಯದಲ್ಲಿ ಗೋವಧೆ ನಿಷೇಧವು ಶೀಘ್ರದಲ್ಲೇ ಜಾರಿಯಾಗಲಿದೆ. ಮುಂಬರುವ ವಿಧಾನಸಭಾ ಅಧಿವೇಶನಗಳಲ್ಲಿ ಗೋವಧೆ ನಿಷೇಧಿಸುವ ಮಸೂದೆಯನ್ನು ಪರಿಚಯಿಸಲಾಗುವುದು ಎಂದು ಹೇಳಿದ್ದಾರೆ.

ಈ ವಿಷಯಕ್ಕೆ ಸಂಬಂಧಿಸಿದಂತೆ ಸಿ.ಟಿ ರವಿ ಟ್ವೀಟ್ ಮಾಡಿದ್ದು, ಈ ಕುರಿತು ಈಗಾಗಲೇ ಸಚಿವ ಸಂಪುಟ ನಿರ್ಧಾರ ಕೈಗೊಂಡಿದೆ. ಈ ನಿಟ್ಟಿನಲ್ಲಿ ಮುಂಬರುವ ವಿಧಾನಸಭಾ ಅಧಿವೇಶನಗಳಲ್ಲಿ ಮಸೂದೆಯನ್ನು ಮಂಡಿಸುವಂತೆ ರಾಜ್ಯ ಪಶುಸಂಗೋಪನಾ ಸಚಿವರಿಗೆ ಸೂಚಿಸಲಾಗಿದೆ ಎಂದು ಅವರು ಹೇಳಿದರು.

ಇನ್ನು ‘ಲವ್ ಜಿಹಾದ್’ ಕುರಿತ ಚರ್ಚೆಯ ಹಿನ್ನೆಲೆಯಲ್ಲಿ ವಿವಾಹದ ಹೆಸರಿನಲ್ಲಿ ಮತಾಂತರಗೊಳ್ಳಲು ಸಾಧ್ಯವಿಲ್ಲ ಎಂದು ಅಲಹಾಬಾದ್ ಹೈಕೋರ್ಟ್ ಹೊರಡಿಸಿದ ಆದೇಶವನ್ನು ರಾಜ್ಯದಲ್ಲಿ ಜಾರಿಗೆ ತರುತ್ತೇವೆ ಎಂದು ಸಿ.ಟಿ ರವಿ ಹೇಳಿದ್ದಾರೆ. “ಲವ್ ಜಿಹಾದ್” ಹೆಸರಿನಲ್ಲಿ ತಮ್ಮ ಸಹೋದರಿಯರನ್ನು ಮತಾಂತರಗೊಳಿಸುವ ಯಾವುದೇ ಪ್ರಯತ್ನವನ್ನು ಸಹಿಸುವುದಿಲ್ಲ ಮತ್ತು ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಎಚ್ಚರಿಸಿದ್ದಾರೆ.

Vijayaprabha Mobile App free

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.