ರಾಜ್ಯದ ಅತ್ಯಂತ ಪ್ರಮುಖ ಆರೋಗ್ಯ ಯೋಜನೆಗಳಲ್ಲಿ ಒಂದಾದ ಯಶಸ್ವಿನಿ ಯೋಜನೆಗೆ ನೋಂದಣಿಗೆ ಕೊನೆಯ ದಿನಾಂಕವನ್ನು ಮಾರ್ಚ್ 31ರವರೆಗೆ ವಿಸ್ತರಿಸಲಾಗಿದೆ. 2022–23ನೇ ಸಾಲಿನಿಂದ ಈ ಯೋಜನೆಯನ್ನು ಮರು ಜಾರಿಗೊಳಿಸಲಾಗಿದ್ದು, ಮೂರನೇ ಬಾರಿ ನೋಂದಣಿ ಅವಧಿಯನ್ನು ವಿಸ್ತರಿಸಲಾಗಿದೆ.
ಹೌದು, ಹಲವರ ಮನವಿ ಹಿನ್ನೆಲೆ, ಈ ಹಿಂದೆ ಫೆ.28 ರವರೆಗೆ ಹೊಸ ಸದಸ್ಯರನ್ನು ನೋಂದಾಯಿಸುವ ಅವಧಿ ವಿಸ್ತರಿಸಲಾಗಿತ್ತು. ಇದೀಗ ಮಾರ್ಚ್ 31ರವರೆಗೆ ಮತ್ತೊಮ್ಮೆ ವಿಸ್ತರಿಸಲಾಗಿದೆ. ಈ ಯೋಜನೆಯಡಿ ಪ್ರಸಕ್ತ ಸಾಲಿಗೆ 30 ಲಕ್ಷ ಸದಸ್ಯರನ್ನು ನೋಂದಾಯಿಸುವ ಗುರಿ ಹೊಂದಲಾಗಿದೆ.
ಇನ್ನು, ಯಶಸ್ವಿನಿ ಯೋಜನೆಯಡಿ ಆಸ್ಪತ್ರೆಗಳಲ್ಲಿ ಒಂದು ಕುಟುಂಬಕ್ಕೆ 5 ಲಕ್ಷ ರೂ. ವರೆಗಿನ ಉಚಿತ ಚಿಕಿತ್ಸೆ ಪಡೆಯಬಹುದಾಗಿದ್ದು, ಸರ್ಕಾರವು ಇದಕ್ಕಾಗಿ ಬಜೆಟ್ ನಲ್ಲಿ 300 ಕೋಟಿ ಅನುದಾನ ನೀಡಿದೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.