ಕೆಪಿಟಿಸಿಎಲ್ ಹಾಗೂ ಎಸ್ಕಾಂ ನೌಕರರ ವೇತನವನ್ನು ಪರಿಷ್ಕರಿಸಿ ರಾಜ್ಯ ಸರ್ಕಾರ ಅದೇಶ ಮಾಡಿದೆ. ಈಗಿರುವ ವೇತನದ ಮೇಲೆ ಶೇ.20ರಷ್ಟು ಹೆಚ್ಚಳಕ್ಕೆ ಸರ್ಕಾರ ಅನುಮತಿ ನೀಡಿದೆ.
ಈ ಮೂಲಕ ರಾಜ್ಯ ಸರ್ಕಾರವು ಕೆಪಿಟಿಸಿಎಲ್ ಹಾಗೂ ಎಸ್ಕಾಂ ನೌಕರರಿಗೆ ಭರ್ಜರಿ ಸಿಹಿಸುದ್ದಿ ನೀಡಿದೆ. ಕೆಪಿಟಿಸಿಎಲ್ ಹಾಗೂ ಎಲ್ಲಾ ಎಸ್ಕಾಂ ನೌಕರರ ವೇತನವನ್ನು ಹೆಚ್ಚಳ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದ್ದು, 2022ರ ಏಪ್ರಿಲ್‌ನಿಂದ ಪೂರ್ವನ್ವಯವಾಗುವಂತೆ ಶೇ. 20 ರಷ್ಟು ವೇತನ ಹೆಚ್ಚಳ ಮಾಡಲು ನಿರ್ಧರಿಸಲಾಗಿದೆ.
ಇದನ್ನು ಓದಿ: ನೀವು SBI ಖಾತೆ ಹೊಂದಿದ್ದೀರಾ? ಮೊಬೈಲ್ ಸಂಖ್ಯೆಯನ್ನು ನವೀಕರಿಸಬೇಕೇ? ಬ್ಯಾಂಕ್‌ಗೆ ಹೋಗದೆ ಹೀಗೆ ಮಾಡಿ..
2022ರ ಏಪ್ರಿಲ್ ಪೂರ್ವಾನ್ವಯವಾಗುವಂತೆ ವೇತನ ಪರಿಷ್ಕರಣೆ ಮಾಡಿ ಆದೇಶಿಸಿದೆ. ಶೇ.28ರಷ್ಟು ವೇತನ ಹೆಚ್ಚಳ ಮಾಡುವಂತೆ ಆಗ್ರಹಿಸಿ ನಾಳೆಯಿಂದ ರಾಜ್ಯಾದ್ಯಂತ ಅನಿರ್ದಿಷ್ಟಾವಧಿ ಪ್ರತಿಭಟನೆ ಮಾಡಲು ಕೆಪಿಟಿಸಿಎಲ್ ನೌಕರರ ಸಂಘ ಕರೆ ಕೊಟ್ಟಿತ್ತು.
ಇನ್ನು, ರಾಜ್ಯ ಸರ್ಕಾರ KPTCL, ಎಸ್ಕಾಂ ನೌಕರರಿಗೆ ಶೇ 20 ರಷ್ಟು ವೇತನ ಹೆಚ್ಚಳ ಮಾಡಿದ್ದು, ನಾಳೆಯಿಂದ ರಾಜ್ಯಾದ್ಯಂತ ಅನಿರ್ದಿಷ್ಟಾವಧಿ ಪ್ರತಿಭಟನೆಯಿಂದ ಹಿಂದೆ ಸರಿಯುವ ಸಾಧ್ಯತೆಯಿದೆ.
ಇದನ್ನು ಓದಿ: ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮ ನೇಮಕಾತಿ: ಹಲವಾರು ಹುದ್ದೆಗಳಿಗೆ ಅರ್ಜಿ ಅಹ್ವಾನ; ಮಾರ್ಚ್ 18 ಕೊನೆ ದಿನ