ಪ್ರಿಯಕರನೊಂದಿಗೆ ಸೇರಿ ಗಂಡನನ್ನೇ ಕೊಂದು ಕಥೆ ಕಟ್ಟಿದ ಹೆಂಡ್ತಿ: ತನಿಖೆಯಲ್ಲಿ ಬಯಲಾಯ್ತು ಸತ್ಯ ಘಟನೆ

ಬೆಂಗಳೂರು: ಪ್ರಿಯಕರನೊಂದಿಗೆ ಸೇರಿ ಗಂಡನನ್ನು ಹತ್ಯೆ ಮಾಡಿದ್ದ ಮಹಿಳೆಯನ್ನು ಬೆಂಗಳೂರು ಪೊಲೀಸರು ಮಂಡ್ಯದಲ್ಲಿ ಬಂಧಿಸಿದ್ದು, ಶಿಲ್ಪಾ ಮತ್ತು ಆಕೆಯ ಪ್ರಿಯಕರ ಬಂಧಿತ ಆರೋಪಿಗಳಾಗಿದ್ದಾರೆ. ಹೌದು, ಬೆಂಗಳೂರು ಮೂಲದ ಶಿಲ್ಪಾಳನ್ನು ಮಂಡ್ಯದ ಮಹೇಶ್ 8 ವರ್ಷಗಳ…

The woman who made up a story about killing her husband

ಬೆಂಗಳೂರು: ಪ್ರಿಯಕರನೊಂದಿಗೆ ಸೇರಿ ಗಂಡನನ್ನು ಹತ್ಯೆ ಮಾಡಿದ್ದ ಮಹಿಳೆಯನ್ನು ಬೆಂಗಳೂರು ಪೊಲೀಸರು ಮಂಡ್ಯದಲ್ಲಿ ಬಂಧಿಸಿದ್ದು, ಶಿಲ್ಪಾ ಮತ್ತು ಆಕೆಯ ಪ್ರಿಯಕರ ಬಂಧಿತ ಆರೋಪಿಗಳಾಗಿದ್ದಾರೆ.

ಹೌದು, ಬೆಂಗಳೂರು ಮೂಲದ ಶಿಲ್ಪಾಳನ್ನು ಮಂಡ್ಯದ ಮಹೇಶ್ 8 ವರ್ಷಗಳ ಹಿಂದೆ ಮದುವೆಯಾಗಿದ್ದು, ಬಳಿಕ ದಂಪತಿ ಬೆಂಗಳೂರಿನ ಕೋಣನಕುಂಟೆ ಬಳಿ ವಾಸವಾಗಿದ್ದರು. ಕಳೆದ ಗುರುವಾರ ಮಹೇಶ್ ಅನ್ನು ಕೊಲೆ ಮಾಡಿದ ಶಿಲ್ಪಾ ಮತ್ತು ಆಕೆಯ ಪ್ರಿಯಕರ, ಫಿಡ್ಸ್ ಬಂದು ಮೃತಪಟ್ಟಿದ್ದಾಗಿ ಕಥೆ ಕಟ್ಟಿ ಮೃತದೇಹವನ್ನು ಮಂಡ್ಯಕ್ಕೆ ತೆಗೆದುಕೊಂಡು ಹೋಗಿದ್ದು, ಅಲ್ಲಿ ಮಹೇಶ್ ಮೃತದೇಹ ನೋಡಿದ ಪೋಷಕರು ಅನುಮಾನ ಬಂದು ಪೊಲೀಸರಿಗೆ ದೂರು ನೀಡಿದ್ದರು.

ಬಳಿಕ ಪೊಲೀಸರು ಮೃತ ಮಹೇಶ್ ಪತ್ನಿ ಶಿಲ್ಪಾಳನ್ನು ವಿಚಾರಣೆಗೆ ಒಳಪಡಿಸಿದಾಗ ಕೊಲೆ ಪ್ರಕರಣ ಬೆಳಕಿಗೆ ಬಂದಿದೆ. ಮಂಡ್ಯ ಪೊಲೀಸರು ಪ್ರಕರಣವನ್ನು ಕೋಣನಕುಂಟೆ ಠಾಣೆಗೆ ವರ್ಗಾಯಿಸಿದ್ದು, ಕೋಣನಕುಂಟೆ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.

Vijayaprabha Mobile App free
WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.