ಬೆಂಗಳೂರು: ಸಂಸದ ತೇಜಸ್ವಿ ಸೂರ್ಯನ ಬುರುಡೆಯಲ್ಲಿ ಮೆದುಳೇ ಇಲ್ಲ ಎಂದು ಸ್ಯಾಂಡಲ್ ವುಡ್ ಕ್ವೀನ್, ಮಾಜಿ ಸಂಸದೆ ರಮ್ಯಾ ಟೀಕಿಸಿದ್ದಾರೆ.
ಹೌದು, ಇನ್ಸ್ಟಾಗ್ರಾಂ ಸ್ಟೋರಿಯಲ್ಲಿ ತೇಜಸ್ವಿ ಸೂರ್ಯ ಅವರ ವಿವಾದಾತ್ಮಕ ಹೇಳಿಕೆಯ ವಿಡಿಯೋ ಶೇರ್ ಮಾಡಿಕೊಂಡಿರುವ ನಟಿ ರಮ್ಯಾ, ಈ ಮನುಷ್ಯನ ಬುರುಡೆಯಲ್ಲಿ ಮೆದುಳು ಇಲ್ಲ ಎಂದು ಇನ್ಸ್ಟಾಗ್ರಾಂ ಸ್ಟೋರಿಯಲ್ಲಿ ಬರೆದುಕೊಂಡಿದ್ದಾರೆ.
ಇನ್ನು, ನಾವು ದೊಡ್ಡದಾಗಿ ಕನಸನ್ನು ಕಾಣಬೇಕು. ಪಾಕಿಸ್ತಾನದ ಮುಸಲ್ಮಾನರನ್ನು ಹಿಂದೂಗಳಾಗಿ ಪರಿವರ್ತನೆ ಮಾಡಬೇಕು. ಅಖಂಡ ಭಾರತದ ಕಲ್ಪನೆಯಲ್ಲಿ ಪಾಕಿಸ್ತಾನವು ಇದೆ ಎಂದು ಸಂಸದ ತೇಜಸ್ವಿ ಸೂರ್ಯ ಹೇಳಿಕೆ ನೀಡಿದ್ದರು.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.