Grace mark : ಮುಂದಿನ ವರ್ಷದಿಂದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಗ್ರೇಸ್ ಮಾರ್ಕ್ (ಕೃಪಾಂಕ) ಇರುವುದಿಲ್ಲ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ (Madhu Bangarappa) ಹೇಳಿದ್ದಾರೆ.
ಹೌದು, ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು, ಸಿಎಂ ಸಿದ್ದರಾಮಯ್ಯ ಸೂಚನೆಯ ಮೇರೆಗೆ ಮುಂದಿನ ವರ್ಷದಿಂದ 10ನೇ ತರಗತಿ ಮಕ್ಕಳಿಗೆ ಕೃಪಾಂಕ ನೀಡುವುದಿಲ್ಲ ಎಂದರು. ಶಾಲಾ ಶಿಕ್ಷಣ ಇಲಾಖೆ ಈ ವರ್ಷ 1.70 ಲಕ್ಷ 10ನೇ ತರಗತಿ ಮಕ್ಕಳಿಗೆ ಶೇ 20 ರಷ್ಟು ಕೃಪಾಂಕ ನೀಡಿತ್ತು. ಆದರೂ ಶಾಲಾ ಶಿಕ್ಷಣ ಇಲಾಖೆ ಈ ವರ್ಷ 10ನೇ ತರಗತಿ ವಿದ್ಯಾರ್ಥಿಗಳಿಗೆ ಶೇ.20ರಷ್ಟು ಕೃಪಾಂಕ ನೀಡಿದ ಬಳಿಕವೂ ಫಲಿತಾಂಶ ಕುಸಿದಿದ್ದರಿಂದ ಸಿಎಂ ಆಕ್ಷೇಪ ವ್ಯಕ್ತಪಡಿಸಿದ್ದರು ಎಂದು ವರದಿಯಾಗಿದೆ.
ಇದನ್ನೂ ಓದಿ: ವಿಜಯದಶಮಿಗೆ ಗಗನಕ್ಕೇರಿದ ಹೂವು-ಹಣ್ಣುಗಳ ಬೆಲೆ; ರಾಜ್ಯದಲ್ಲಿ ಎಷ್ಟಿದೆ ಗೊತ್ತಾ ಬೆಲೆ?