ರಾಜೀನಾಮೆ ಕೊಡುವ ಪ್ರಶ್ನೆಯೇ ಇಲ್ಲ; ನಾನು ಅಪ್ಪಟ ದೇಶಭಕ್ತನೆಂದ ಸಚಿವ ಈಶ್ವರಪ್ಪ

ಬೆಂಗಳೂರು: ಕೇಸರಿ ಧ್ವಜ ಹಾರಾಟದ ಹೇಳಿಕೆ ನೀಡಿರುವ ಸಚಿವ ಈಶ್ವರಪ್ಪ ಅವರ ರಾಜೀನಾಮೆಗೆ ಪ್ರತಿಪಕ್ಷ ಕಾಂಗ್ರೆಸ್ ಪಟ್ಟು ಹಿಡಿದು ಕೂತಿದ್ದು, ಈಶ್ವರಪ್ಪ ಮಾತ್ರ ನಾನು ಯಾವುದೇ ಕಾರಣಕ್ಕೂ ರಾಜೀನಾಮೆ ನೀಡುವುದಿಲ್ಲ ಎಂದು ಹೇಳಿದ್ದಾರೆ. ಹೌದು,…

k s eshwarappa vijayaprabha

ಬೆಂಗಳೂರು: ಕೇಸರಿ ಧ್ವಜ ಹಾರಾಟದ ಹೇಳಿಕೆ ನೀಡಿರುವ ಸಚಿವ ಈಶ್ವರಪ್ಪ ಅವರ ರಾಜೀನಾಮೆಗೆ ಪ್ರತಿಪಕ್ಷ ಕಾಂಗ್ರೆಸ್ ಪಟ್ಟು ಹಿಡಿದು ಕೂತಿದ್ದು, ಈಶ್ವರಪ್ಪ ಮಾತ್ರ ನಾನು ಯಾವುದೇ ಕಾರಣಕ್ಕೂ ರಾಜೀನಾಮೆ ನೀಡುವುದಿಲ್ಲ ಎಂದು ಹೇಳಿದ್ದಾರೆ.

ಹೌದು, ಕಾಂಗ್ರೆಸ್ ನವರು ಎಷ್ಟು ಬೇಕಾದರೂ ಪ್ರತಿಭಟನೆ ಮಾಡಲಿ ನಾನು ರರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ. ನಾನು ರಾಷ್ಟ್ರ ಧ್ವಜಕ್ಕೆ ಅವಮಾನ ಮಾಡಿಲ್ಲ. ಸದನದಲ್ಲಿ ಧ್ವಜ ಪ್ರದರ್ಶನ ಮಾಡಿ ಅವಮಾನ ಮಾಡಿದ್ದು ಡಿ.ಕೆ ಶಿವಕುಮಾರ್. ನಾನು ಅಪ್ಪಟ ದೇಶಭಕ್ತ. ತ್ರಿವರ್ಣ ಧ್ವಜದ ಬಗ್ಗೆ ನನಗೆ ಅಪಾರವಾದ ಗೌರವವಿದೆ. ಕಾಂಗ್ರೆಸ್‍ನವರು ರಾಜೀನಾಮೆ ಕೊಡು ಎಂದು ಕೇಳಿದ ತಕ್ಷಣ ನಾನೇಕೆ ಕೊಡಲಿ ಎಂದು ಸಚಿವ ಈಶ್ವರಪ್ಪ ಪ್ರಶ್ನಿಸಿದ್ದಾರೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.