2023ರ ಏಪ್ರಿಲ್ 1 ರೊಳಗೆ ಮತದಾರರ ಪಟ್ಟಿಯಲ್ಲಿ ಹೆಸರಿರುವ ಎಲ್ಲರೂ ತಮ್ಮ ವೋಟರ್ ಐಡಿಯನ್ನು ಆಧಾರ್ ಕಾರ್ಡ್ ನೊಂದಿಗೆ ಲಿಂಕ್ ಮಾಡಬೇಕು ಎಂದು ಕೇಂದ್ರ ಸರ್ಕಾರ ಘೋಷಿಸಿದೆ.
ಹೌದು, ಎಲ್ಲರೂ ತಮ್ಮ ಆಧಾರ್ ಸಂಖ್ಯೆಯನ್ನು ನಮೂನೆ 6B ಮೂಲಕ ಸಂಬಂಧಪಟ್ಟ ಚುನಾವಣಾಧಿಕಾರಿಗಳಿಗೆ ನೀಡುವಂತೆ ಸೂಚಿಸಿದ್ದು, ವೋಟರ್ ಐಡಿಯನ್ನು ಆಧಾರ್‌ನೊಂದಿಗೆ ಲಿಂಕ್ ಮಾಡುವ ಪ್ರಕ್ರಿಯೆಗೆ ಪರ್ಯಾಯ ವ್ಯವಸ್ಥೆಯನ್ನೂ ಕೇಂದ್ರ ಸರ್ಕಾರ ಕಲ್ಪಿಸಿದೆ.
ಒಂದು ವೇಳೆ ಯಾರಾದರೂ ಆಧಾರ್ ಹೊಂದಿಲ್ಲದೆ ವೋಟರ್ ಐಡಿಯನ್ನು ಆಧಾರ್‌ನೊಂದಿಗೆ ಲಿಂಕ್ ಸಾಧ್ಯವಾಗದೆ ಇರುವವರು, ಫಾರ್ಮ್ 6B ಮೂಲಕ ಚುನಾವಣಾ ಅಧಿಕಾರಿಗಳಿಗೆ ಅಗತ್ಯವಿರುವ ಇತರೆ ದಾಖಲೆಗಳನ್ನು ಸಲ್ಲಿಸಬಹುದು.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.