ನವದೆಹಲಿ: ಭಾರತ-ಪಾಕ್ ನಡುವಿನ ಟಿ-20 ವಿಶ್ವಕಪ್ ಪಂದ್ಯದ ಸೋಲಿನ ಬಳಿಕ ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಅವರ ಮಗಳಿಗೆ ಆನ್ ಲೈನ್ ನಲ್ಲಿ ಅತ್ಯಾಚಾರದ ಬೆದರಿಕೆ ಹಾಕಲಾಗಿರುವುದಕ್ಕೆ ಸಂಬಂಧಿಸಿದಂತೆ ದೆಹಲಿ ಮಹಿಳಾ ಆಯೋಗ(ಡಿಸಿಡಬ್ಲ್ಯು)ವು ಮಂಗಳವಾರ ಪೊಲೀಸರಿಗೆ ನೋಟಿಸ್ ಜಾರಿ ಮಾಡಿದೆ.
9 ತಿಂಗಳ ಮಗುವಿಗೆ ಅತ್ಯಾಚಾರದ ಬೆದರಿಕೆ ಹಾಕಲಾಗುವುದು ‘ಅತ್ಯಂತ ನಾಚಿಕೆಗೇಡಿನ ವಿಚಾರ’ವಾಗಿದೆ ಎಂದು ಹೇಳಿರುವ ದೆಹಲಿ ಮಹಿಳಾ ಆಯೋಗ (ಡಿಸಿಡಬ್ಲ್ಯು) ಅಧ್ಯಕ್ಷೆ ಸ್ವಾತಿ ಮಾಲಿವಾಲ್, ಈ ಸಂಬಂಧ ತನಿಖೆಯ ಮಾಹಿತಿಯನ್ನು ನೀಡುವಂತೆ ದೆಹಲಿ ಪೊಲೀಸರಿಗೆ ಆಗ್ರಹಿಸಿದ್ದಾರೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.