ವಿಜಯನಗರ : ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಕುಮತಿ ಗ್ರಾಮದಲ್ಲಿ ಕೆರೆಯಲ್ಲಿ ಈಜಲು ಹೋಗಿದ್ದ ಮೂವರು ಬಾಲಕರು ಸಾವನ್ನಪ್ಪಿದ ದಾರುಣ ಘಟನೆ ಇಂದು ನಡೆದಿದೆ.
ಹೌದು, ಮೃತ ಬಾಲಕರನ್ನು ಕುಮತಿ ಗ್ರಾಮದ ಸಾಗರ್ (14), ಗುರು (14) ಹಾಗೂ ವಿನಯ್ (11) ಎಂದು ಗುರುತಿಸಲಾಗಿದ್ದು, ದಸರಾ ರಜೆ ಹಿನ್ನೆಲೆಯಲ್ಲಿ ಮೂವರು ಬಾಲಕರು ಕೆರೆಯಲ್ಲಿ ಈಜಲು ಹೋಗಿದ್ದರು. ಈ ವೇಳೆ ಈ ದುರ್ಘಟನೆ ನಡೆದಿದೆ. ಇತ್ತ ಪೋಷಕರ ಆಕ್ರಂದನ ಮುಗಿಲುಮುಟ್ಟಿದ್ದು, ಸ್ಥಳಕ್ಕೆ ಕಾನಾಹೊಸಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಇದನ್ನೂ ಓದಿ: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ; ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.