ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಪರಿಣಾಮ ರಾಜ್ಯದಲ್ಲಿ ಹಲವೆಡೆ ಬಾರಿ ಮಳೆಯಾಗುತ್ತಿದ್ದು ಹಲವೆಡೆ ನೆರೆ ಉಂಟಾಗಿದ್ದು ಅಪಾರ ಪ್ರಮಾಣದ ಬೆಳೆ ನಾಶವಾಗಿದ್ದು, ರಾಜ್ಯದಲ್ಲಿ ಇನ್ನು ಮುಂದಿನ 3 ದಿನ ಭಾರಿ ಮಳೆಯಾಗುವ ಸಾಧ್ಯತೆ ಎಂದು ಹವಮಾನ ಇಲಾಖೆ ಸೂಚನೆ ನೀಡಿದೆ.
ರಾಜ್ಯದ ಕರಾವಳಿ ಭಾಗದ ಉತ್ತರ ಕನ್ನಡ ಮತ್ತು ದಕ್ಷಿಣ ಕನ್ನಡದಲ್ಲಿ ಹಾಗು ಉಡುಪಿ ಜಿಲ್ಲೆಗಳಲ್ಲಿ ಗುಡುಗು ಮತ್ತು ಮಿಂಚು ಸಹಿತ ಮುಂದಿನ ಮೂರು ದಿನಗಳು ಭಾರಿ ಮಳೆಯಾಗುವ ಸಾಧ್ಯತೆ ಇದ್ದು ಈ ಜಿಲ್ಲೆಗಳಲ್ಲಿ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಣೆ ಮಾಡಿದೆ.
ಇನ್ನು ಬೆಂಗಳೂರು, ಬೆಂ.ಗ್ರಾಮಾಂತರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ ಚಿಕ್ಕಬಳ್ಳಾಪುರ, ಕೋಲಾರ,ಮತ್ತು ತುಮಕೂರಿನಲ್ಲಿ ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಕೊಡಗು ಮತ್ತು ಹಾಸನದಲ್ಲಿ ಮುಂದಿನ ಎರಡು ದಿನಗಳು ಸಾಧ್ಯತೆ ಇದ್ದು, ಅ.25ರಂದು ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ.