ದೀಪಾವಳಿ ಹಬ್ಬದ ಸಂಭ್ರಮದ ನಡುವೆಯೇ ಚಿತ್ರದುರ್ಗದಲ್ಲಿ ಭೀಕರ ದುರಂತವೊಂದು ನಡೆದಿದ್ದು, ಕಾರೊಂದು ರಸ್ತೆ ವಿಭಜಕಕ್ಕೆ ಡಿಕ್ಕಿಯಾದ ಪರಿಣಾಮ ಮೂವರು ದುರ್ಮರಣಕ್ಕೀಡಾಗಿದ್ದಾರೆ.
ಹೌದು, ಚಿತ್ರದುರ್ಗ ನಗರದಲ್ಲಿ ಸೋಮವಾರ ಮಧ್ಯರಾತ್ರಿ(ನಿನ್ನೆ) 12ರ ಸಮಯದಲ್ಲಿ ಈ ಘಟನೆ ನಡೆದಿದ್ದು, ಗಾಂಧಿ ವೃತ್ತದ ಕಡೆಗೆ ಹೋಗುತ್ತಿದ್ದ ಕಾರು ವೇಗವಾಗಿ ಬಂದು ಪ್ರವಾಸಿ ಮಂದಿರದ ಮುಂಭಾಗದ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದಿದೆ. ಇದರಿಂದ ಕಾರು ಚಾಲಕ ಮನು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದು, ಮತ್ತಿಬ್ಬರು ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗ ಮಧ್ಯೆ ಸಾವನ್ನಪ್ಪಿದ್ದಾರೆ.
ಘಟನೆಯಲ್ಲಿ ಇನ್ನೂ ಮೂವರು ಗಾಯಗೊಂಡಿದ್ದು, ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕಾರಿನಲ್ಲಿ ಒಟ್ಟು ಆರು ಮಂದಿ ಪ್ರಯಾಣಿಸುತ್ತಿದ್ದರು ಎನ್ನಲಾಗಿದ್ದು, ಮೃತರೆಲ್ಲರೂ ಬೆಂಗಳೂರು ಮೂಲದವರು ಎಂದು ತಿಳಿದು ಬಂದಿದೆ. ಮಧ್ಯರಾತ್ರಿ ಸಂಚಾರಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ಕೈಗೊಂಡಿದ್ದು, ಸಂಚಾರಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.