Accident: ಹಿಟ್​ ಆ್ಯಂಡ್ ರನ್​ಗೆ ಮೂವರು ವಿದ್ಯಾರ್ಥಿಗಳು ಬಲಿ

Accident: ಬೆಂಗಳೂರಲ್ಲಿ ಹಿಟ್​ & ರನ್​ಗೆ (Hit & Run) ಮೂವರು ವಿದ್ಯಾರ್ಥಿಗಳು ಬಲಿಯಾಗಿದ್ದಾರೆ. ಬೆಂಗಳೂರು ನಗರ ಜಿಲ್ಲೆ ಉತ್ತರ ತಾಲೂಕಿನ ಚಿಕ್ಕಜಾಲ ಬಳಿಯ ಕೆಂಪೇಗೌಡ ಏರ್​​ಪೋರ್ಟ್​ ರಸ್ತೆಯಲ್ಲಿ ಅಪಘಾತ (Accident) ಸಂಭವಿಸಿದೆ. ಹೌದು,…

Accident vijayaprabhanews

Accident: ಬೆಂಗಳೂರಲ್ಲಿ ಹಿಟ್​ & ರನ್​ಗೆ (Hit & Run) ಮೂವರು ವಿದ್ಯಾರ್ಥಿಗಳು ಬಲಿಯಾಗಿದ್ದಾರೆ. ಬೆಂಗಳೂರು ನಗರ ಜಿಲ್ಲೆ ಉತ್ತರ ತಾಲೂಕಿನ ಚಿಕ್ಕಜಾಲ ಬಳಿಯ ಕೆಂಪೇಗೌಡ ಏರ್​​ಪೋರ್ಟ್​ ರಸ್ತೆಯಲ್ಲಿ ಅಪಘಾತ (Accident) ಸಂಭವಿಸಿದೆ.

ಹೌದು, ಮೂವರು ಯುವಕರು ಬೈಕ್​ನಲ್ಲಿ ಲಾಂಗ್​ ಡ್ರೈವ್​ ಹೋಗಿದ್ದಾಗ ಅಪರಿಚಿತ ವಾಹನ ಡಿಕ್ಕಿಯಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ರೋಹಿತ್​​(22), ಸುಚಿತ್(22), ಹರ್ಷ(22) ಮೃತ ದುರ್ದೈವಿಗಳು.

ಮೃತ ಮೂವರು ವಿದ್ಯಾರ್ಥಿಗಳು GKVKನಲ್ಲಿ ಬಿಎಸ್ಸಿ ವ್ಯಾಸಂಗ ಮಾಡುತ್ತಿದ್ದರು ಎಂದು ತಿಳಿದುಬಂದಿದೆ. ಅಪಘಾತದ ಭೀಕರತೆಗೆ ಮೃತ ದೇಹಗಳು ಚಲ್ಲಾಪಿಲ್ಲಿಯಾಗಿದ್ದು, ಅಪಘಾತದ ನಂತರ ಚಾಲಕ ಪರಾರಿಯಾಗಿದ್ದಾನೆ. ಚಿಕ್ಕಜಾಲ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Vijayaprabha Mobile App free

ಇದನ್ನು ಓದಿ: ರೈಲು ಹಳಿ ಮೇಲೆ ರೀಲ್ಸ್ ಮಾಡಲು ಹೋಗಿ ಒಂದೇ ಕುಟುಂಬದ ಮೂವರ ದುರಂತ ಅಂತ್ಯ!

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.