ರಾಜ್ಯದಲ್ಲಿ ಭಾರಿ ಮಳೆಗೆ ಮೂವರು ಬಲಿ; 150 ಕಾರುಗಳು, 600 ಬೈಕ್‌ ಮುಳುಗಡೆ

ಭಾರಿ ಮಳೆಗೆ ಮೂವರು ಬಲಿ : ದಕ್ಷಿಣ ಕನ್ನಡ, ಉಡುಪಿ, ದಾವಣಗೆರೆ ಸೇರಿ ಐದಾರು ಜಿಲ್ಲೆಗಳಲ್ಲಿ ಭಾರೀ ಮಳೆ (Heavy Rain) ಯಾಗಿದ್ದು ಸಿಡಿಲಿನ ಅಬ್ಬರಕ್ಕೆ ರಾಜ್ಯದಲ್ಲಿ ಮೂವರು ಮೃತಪಟ್ಟಿದ್ದಾರೆ. ಹೌದು, ವಿಜಯನಗರ ಜಿಲ್ಲೆಯ…

Heavy rain

ಭಾರಿ ಮಳೆಗೆ ಮೂವರು ಬಲಿ : ದಕ್ಷಿಣ ಕನ್ನಡ, ಉಡುಪಿ, ದಾವಣಗೆರೆ ಸೇರಿ ಐದಾರು ಜಿಲ್ಲೆಗಳಲ್ಲಿ ಭಾರೀ ಮಳೆ (Heavy Rain) ಯಾಗಿದ್ದು ಸಿಡಿಲಿನ ಅಬ್ಬರಕ್ಕೆ ರಾಜ್ಯದಲ್ಲಿ ಮೂವರು ಮೃತಪಟ್ಟಿದ್ದಾರೆ.

ಹೌದು, ವಿಜಯನಗರ ಜಿಲ್ಲೆಯ ಹಗರಿಬೊಮ್ಮನಹಳ್ಳಿ ತಾಲೂಕಿನ ದಶಮಾಪುರ ಗ್ರಾಮದಲ್ಲಿ ಹೊಲದಲ್ಲಿ ಕೆಲಸ ಮಾಡುತ್ತಿದ್ದ ಇಬ್ಬರಿಗೆ ಸಿಡಿಲು ಹೊಡೆದು ಭಾನುವಾರ ಇಬ್ಬರು ಮೃತಪಟ್ಟಿದ್ದಾರೆ. ಮೃತರು ಬಣಕಾರ್ ನಾಗಪ್ಪ (58), ಬಣಕಾರ್ ಪ್ರಶಾಂತ್ (40) ಎಂದು ಪೊಲೀಸರು ತಿಳಿಸಿದ್ದಾರೆ. ಮೃತರು ಹೊಲದಲ್ಲಿ ಕೆಲಸ ಮಾಡುವಾಗ ಸಿಡಿಲು ಹೊಡೆದು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ: ರಾಜ್ಯದ ಈ ಜಿಲ್ಲೆಗಳಲ್ಲಿ ಭಾರೀ ಮಳೆಯ ಮುನ್ಸೂಚನೆ; ಹವಾಮಾನ ಇಲಾಖೆ ಎಚ್ಚರಿಕೆ

Vijayaprabha Mobile App free

ಇನ್ನು, ಚನ್ನಗಿರಿ ತಾಲೂಕಿನಲ್ಲಿ ಮನೆಗೋಡೆ ಕುಸಿದು ಬಸವರಾಜಪ್ಪ(81) ಮೃತಪಟ್ಟಿದ್ದಾರೆ. ಈ ನಡುವೆ ಕರಾವಳಿ ಸೇರಿ ದಕ್ಷಿಣ ಒಳನಾಡಿನಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಬೆಂಗಳೂರಿನಲ್ಲಿ ಭಾರೀ ಮಳೆ.. 150 ಕಾರುಗಳು, 600 ಬೈಕ್‌ ಮುಳುಗಡೆ

ಬೆಂಗಳೂರಿನಲ್ಲಿ ಶನಿವಾರ ಸುರಿದ ಭಾರೀ ಮಳೆಯಿಂದಾಗಿ ಕೆಲ ಬಡಾವಣೆಗಳಲ್ಲಿ ಜನಜೀವನ ಅಸ್ತವ್ಯಸ್ತಗೊಂಡಿದ್ದು, ಯಲಹಂಕದ ಕೇಂದ್ರೀಯ ವಿಹಾರ ಅಪಾರ್ಟ್‌ಮೆಂಟ್‌ ತಡೆಗೋಡೆ ಕುಸಿದು ನೀರು ನುಗ್ಗಿದೆ. 150 ಕಾರುಗಳು, 600 ಬೈಕ್‌ಗಳು ನೀರಿನಲ್ಲಿ ಮುಳುಗಿದವು.

ಭಾನುವಾರವೂ 4 ಅಡಿಗಳಷ್ಟು ನೀರು ನಿಂತಿತ್ತು. ಟ್ರ್ಯಾಕ್ಟರ್‌ ಮೂಲಕ ಅಗತ್ಯ ವಸ್ತುಗಳನ್ನು ಪೂರೈಸಲಾಗಿದೆ. ವಿಜಯನಗರದ ಮನುವನದ ಬಳಿ ಮನೆಗಳಿಗೆ ನೀರು ನುಗ್ಗಿದೆ. ಮಲ್ಲೇಶ್ವರ ಸೇರಿದಂತೆ ಹಲವೆಡೆ 20ಕ್ಕೂ ಹೆಚ್ಚು ಮರಗಳು ಉರುಳಿವೆ.

ಇದನ್ನೂ ಓದಿ: ಮಳೆ-ಗಾಳಿಗೆ ನೆಲಕಚ್ಚಿದ ಜೋಳ; ಕಣ್ಣೀರಿಟ್ಟ ರೈತರು

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.