ನಿನ್ನೆಯಿಂದ ರಾಜ್ಯದ ಹಲವೆಡೆ ಮಳೆಯಾಗುತ್ತಿದ್ದು, ಬಿಸಿಲ ಧಗೆಗೆ ತತ್ತರಿಸಿದ್ದ ಕರುನಾಡಿಗೆ ಮಳೆಯರಾಯ ತಂಪೆರೆದಿದ್ದು, ಇಂದಿಂದ ಎರಡು ದಿನಗಳ ಕಾಲ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಹೌದು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ತುಮಕೂರು, ಚಾಮರಾಜನಗರ, ಹಾಸನ, ಚಿಕ್ಕಬಳ್ಳಾಪುರ, ಮಂಡ್ಯ, ಮೈಸೂರು, ರಾಮನಗರ, ಕೋಲಾರ ಮತ್ತು ಕೊಡಗು ಜಿಲ್ಲೆಯಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಇದನ್ನು ಓದಿ: Ration Card ಹೊಂದಿರುವವರಿಗೆ ಇನ್ಮುಂದೆ ಉಚಿತವಾಗಿ ಸಿಗಲಿದೆ 150 ಕೆಜಿ ಅಕ್ಕಿ, ಇವರಿಗೆ ಮಾತ್ರ..!
ಇನ್ನು, ಉತ್ತರ ಒಳನಾಡಿಲ್ಲೂ ಇನ್ನೆರಡು ದಿನ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿಯಲ್ಲಿ ಒಣಹವೆ ಮುಂದುವರಿಯಲಿದೆ. ಇನ್ನು, ಏಪ್ರಿಲ್ 5ರ ಬಳಿಕ ಎಂದಿನಂತೆ ಬಿಸಿಲ ವಾತಾವರಣ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಇದನ್ನು ಓದಿ: 7 ದಿನಗಳಲ್ಲಿ ಪಾನ್ ಕಾರ್ಡ್ ಪಡೆಯುವುದು ಹೇಗೆ? PAN ಕಳೆದು ಹೋದರೆ 5 ನಿಮಿಷದಲ್ಲಿ ಹೀಗೆ ಡೌನ್‌ಲೋಡ್ ಮಾಡಿ