By-elections :ಕರ್ನಾಟಕದ ಮೂರು ವಿಧಾನಸಭಾ ಮೂರು ಕ್ಷೇತ್ರಗಳಿಗೆ ಉಪ ಚುನಾವಣೆ ಘೋಷಣೆಯಾಗಿದ್ದು ಗೊತ್ತೇ ಇದೆ. ಇಂದು ಬಿಜೆಪಿ ಹೈಕಮಾಂಡ್ ಕರ್ನಾಟಕದ ಎರಡು ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಗೆ ಇದೀಗ ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ.
ಅದರಂತೆ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರ ಪುತ್ರ ಭರತ್ ಬೊಮ್ಮಾಯಿ ಅವರಿಗೆ ಶಿಗ್ಗಾಂವಿ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಟಿಕೆಟ್ ಘೋಷಿಸಲಾಗಿದೆ. ಅದೇರೀತಿ ಸಂಡೂರು ವಿಧಾನಸಭಾ ಕ್ಷೇತ್ರದಿಂದ ಬಂಗಾರು ಹನುಮಂತು ಅವರಿಗೆ ಟಿಕೆಟ್ ನೀಡಲಾಗಿದೆ.
ಆದರೆ, ಚನ್ನಪಟ್ಟಣದ ವಿಧಾನಸಭಾ ಕ್ಷೇತ್ರಕ್ಕೆ ಬಿಜೆಪಿ ಇನ್ನು ಕೂಡ ಟಿಕೆಟ್ ಘೋಷಣೆ ಮಾಡಿಲ್ಲ. ನ.3ರಂದು ಈ ಮೂರು ಕ್ಷೇತ್ರಗಳಿಗೆ ಉಪ ಚುನಾವಣೆ ನಡೆಯಲಿದೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.




