ಜಾರಕಿಹೊಳಿ ಸಿಡಿ ಪ್ರಕರಣ: ಮ್ಯಾಜಿಸ್ಟ್ರೇಟ್ ಕೋರ್ಟ್, ಡಿಕೆಶಿ-ಜಾರಕಿಹೊಳಿ ಮನೆಗಳಿಗೆ ಬಿಗಿ ಭದ್ರತೆ

ಬೆಂಗಳೂರು: ಸಿಡಿ ಪ್ರಕರಣದ ಯುವತಿ ಇಂದು ಬೆಂಗಳೂರಿನ 24ನೇ ಎಸಿಎಂಎಂ ಕೋರ್ಟ್ ಗೆ ಹಾಜರಾಗಿ, ನ್ಯಾಯಾಧೀಶರ ಮುಂದೆ ತನ್ನ ಹೇಳಿಕೆಯನ್ನು ದಾಖಲಿಸಲಿದ್ದಾಳೆ. ಈ ಹಿನ್ನೆಲೆ ಯಾವುದೇ ಅಹಿತಕರ ಘಟನೆ ನಡೆಯದಂತೆ ತಡೆಯಲು ಕೋರ್ಟ್ ಬಳಿ…

dk-shivakumar-and-ramesh-jarkiholi-vijayaprabha-news

ಬೆಂಗಳೂರು: ಸಿಡಿ ಪ್ರಕರಣದ ಯುವತಿ ಇಂದು ಬೆಂಗಳೂರಿನ 24ನೇ ಎಸಿಎಂಎಂ ಕೋರ್ಟ್ ಗೆ ಹಾಜರಾಗಿ, ನ್ಯಾಯಾಧೀಶರ ಮುಂದೆ ತನ್ನ ಹೇಳಿಕೆಯನ್ನು ದಾಖಲಿಸಲಿದ್ದಾಳೆ. ಈ ಹಿನ್ನೆಲೆ ಯಾವುದೇ ಅಹಿತಕರ ಘಟನೆ ನಡೆಯದಂತೆ ತಡೆಯಲು ಕೋರ್ಟ್ ಬಳಿ ಪೊಲೀಸ್ ಭದ್ರತೆ ಒದಗಿಸಲಾಗಿದೆ. ಯುವತಿಗೆ ಭದ್ರತೆ ನೀಡಲು ಮಹಿಳಾ ಪೊಲೀಸ್ ಸಿಬ್ಬಂದಿಯನ್ನೂ ನಿಯೋಜಿಸಲಾಗಿದೆ ಎಂದು ತಿಳಿದುಬಂದಿದೆ.

ಡಿಕೆಶಿ-ಜಾರಕಿಹೊಳಿ ಮನೆಗಳಿಗೆ ಬಿಗಿ ಭದ್ರತೆ:

ಸಿಡಿ ಲೇಡಿ ಇಂದು ಯಾವುದೇ ಕ್ಷಣದಲ್ಲಾದರೂ ಜಡ್ಜ್ ಎದುರು ಹಾಜರಾಗುವ ಸಾಧ್ಯತೆ ಇದ್ದು, ಈ ಹಿನ್ನೆಲೆ ಪ್ರಕರಣದಲ್ಲಿ ಆರೋಪ ಪ್ರತ್ಯಾರೋಪಗಳಲ್ಲಿ ತೊಡಗಿರುವ ಪ್ರಕರಣದ ಆರೋಪಿ ಎನ್ನಲಾಗುತ್ತಿರುವ ರಮೇಶ್ ಜಾರಕಿಹೊಳಿ & ಪ್ರಕರಣದ ಸೂತ್ರಧಾರ ಎಂದು ಬಿಂಬಿಸಲ್ಪಟ್ಟಿರುವ ಕಾಂಗ್ರೆಸ್ ಅಧ್ಯಕ್ಷ ಡಿಕೆಶಿ ನಿವಾಸಕ್ಕೆ ಬಿಗಿ ಭದ್ರತೆ ಒದಗಿಸಲಾಗಿದೆ.

Vijayaprabha Mobile App free

80ಕ್ಕೂ ಹೆಚ್ಚು ಪೊಲೀಸರು, 5 ಕೆಎಸ್‌ಆರ್‌ಪಿ, ಎಸಿಪಿ, ನಾಲ್ವರು ಇನ್ಸ್‌ಪೆಕ್ಟರ್, ಐವರು ಎಸ್ಐ ನಿಯೋಜನೆ ಮಾಡಲಾಗಿದೆ. ಆದರೆ ಡಿಕೆಶಿ & ಜಾರಕಿಹೊಳಿ ಬೆಳಗಾವಿ ಪ್ರವಾಸದಲ್ಲಿದ್ದಾರೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.