ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ ಅಡಿಯಲ್ಲಿ 12ನೇ ಕಂತು ಬಿಡುಗಡೆ ದಿನಾಂಕವನ್ನು ಪ್ರಕಟಿಸಿದ್ದು, ಸೆಪ್ಟೆಂಬರ್ 1, 2022 ರ ವೇಳೆಗೆ ಖಾತೆಗೆ ಹಣ ಜಮಾ ಆಗಲಿದೆ ಎನ್ನಲಾಗಿದೆ.
ಈ ಮಧ್ಯೆ, ಕೇಂದ್ರ ಸರ್ಕಾರವು ಪಿ.ಎಂ.-ಕಿಸಾನ್ ಯೋಜನೆಯ ಲಾಭ ಪಡೆಯಲು ಬಯೋಮೆಟ್ರಿಕ್ ಆಧಾರಿತ ಇ-ಕೆ.ವೈ.ಸಿ (E KYC) ಮಾಡುವುದು ಕಡ್ಡಾಯವಾಗಿದ್ದು, ಆ. 31 ಕೊನೇಯ ದಿನವಾಗಿದ್ದು, KYC ಅನ್ನು ಪೂರ್ಣಗೊಳಿಸಲು ತಿಳಿಸಲಾಗಿದೆ.
ಒಂದು ವೇಳೆ, ಈ ಯೋಜನೆಯಡಿ ಕೆ.ವೈ.ಸಿ ಮಾಡಿಕೊಳ್ಳದಿದ್ದಲ್ಲಿ ಅಂತಹ ರೈತರಿಗೆ ಆರ್ಥಿಕ ಸೌಲಭ್ಯ ದೊರೆಯುವುದಿಲ್ಲ. ಇನ್ನು, ಯೋಜನೆಯ ಭಾಗವಾಗಿ ಕೇಂದ್ರವು ವರ್ಷಕ್ಕೆ 6,000 ರೂ. ನೀಡಲಿದ್ದು, ಭೂಮಿ ಹೊಂದಿರುವ ರೈತ ಕುಟುಂಬಗಳಿಗೆ ಮೂರು ಸಮಾನ ಕಂತುಗಳಲ್ಲಿ ಮೊತ್ತ ಬಿಡುಗಡೆ ಮಾಡಲಾಗುತ್ತದೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.