ಬೆಂಗಳೂರು ಸೆ.11: ರಾಜ್ಯದಲ್ಲಿ ಕರೋನ ಹಾವಳಿ ಜೋರಾಗಿದ್ದು ಇಂದು 9,464 ಹೊಸ ಕೊರೋನಾ ಸೋಂಕಿತ ಪ್ರಕರಣಗಳು ಪತ್ತೆಯಾಗಿದ್ದು, ಇಂದು 130 ಜನರು ಸಾವನ್ನಪ್ಪಿದ್ದಾರೆ, ರಾಜ್ಯದಲ್ಲಿಂದು 12,545 ಜನರು ಕರೋನ ಸೋಂಕಿನಿಂದ ಗುಣಮುಖರಾಗಿದ್ದು, ಸೋಂಕಿತರ ಸಂಖ್ಯೆ 4,40,411ಕ್ಕೆ ಏರಿಕೆಯಾಗಿದೆ.
ಇದನ್ನು ಓದಿ: ಭಾರತ ಮತ್ತು ಚೀನಾ ವಿವಾದ : ಉಭಯ ದೇಶಗಳ ನಡುವೆ ಐದು ಅಂಶಗಳ ಒಪ್ಪಂದ!
ರಾಜ್ಯದಲ್ಲಿ ಒಟ್ಟು ಸೋಂಕಿತರ ಪೈಕಿ 3,34,999 ಜನರು ಕರೋನ ಸೋಂಕಿನಿಂದ ಗುಣಮುಖರಾಗಿದ್ದಾರೆ. ಇನ್ನು 98,326 ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ. ರಾಜ್ಯದಲ್ಲಿ ಈವರೆಗೆ ಒಟ್ಟು 7,067 ಜನರು ಕೊರೋನಾಗೆ ಬಲಿಯಾಗಿದ್ದಾರೆ ಎಂದು ಆರೋಗ್ಯ ಇಲಾಖೆ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.
Add a comment