Bengaluru Bandh: ತಮಿಳುನಾಡಿಗೆ ಕಾವೇರಿ ನೀರು ಹರಿಸುವುದನ್ನು ವಿರೋಧಿಸಿ 150ಕ್ಕೂ ಹೆಚ್ಚು ಸಂಘಟನೆಗಳು ಬೆಂಗಳೂರು ಬಂದ್ ಗೆ ಕರೆ ಕೊಟ್ಟಿವೆ. ಸಂಜೆ 6ರವರೆಗೆ ಬೆಂಗಳೂರು ಸಂಪೂರ್ಣ ಸ್ತಬ್ದವಾಗುವ ಸಾಧ್ಯತೆಯಿದೆ. ಜತೆಗೆ ರಾಮನಗರ, ಮಳವಳ್ಳಿ, KRಪೇಟೆಯಲ್ಲೂ ಬಂದ್ ಗೆ ಕರೆ ನೀಡಲಾಗಿದೆ.
ಇದನ್ನೂ ಓದಿ: ಇಂದಿನ ಸುಕರ್ಮ ಯೋಗದಿಂದ ಈ ರಾಶಿಯವರಿಗೆ ಕೆಲಸದಲ್ಲಿ ಉತ್ತಮ ಯಶಸ್ಸು, ಜೀವನದಲ್ಲಿ ಪ್ರಗತಿ..!
Bengaluru Bandh: ಬಂದ್‌ಗೆ ಯಾರೆಲ್ಲಾ ಬೆಂಬಲ?

- ಬೆಂಗಳೂರು ಹೋಟೆಲ್ ಮಾಲೀಕರ ಸಂಘ
- KSRTC ಸಿಬ್ಬಂದಿ ಮತ್ತು ಕಾರ್ಮಿಕ ಒಕ್ಕೂಟ
- ಕರ್ನಾಟಕ ಚಾಲಕರ ಒಕ್ಕೂಟ
- ಸಾರಿಗೆ ನಿಗಮಗಳ ನೌಕರರ ಸಮಾನ ಮನಸ್ಕರ ವೇದಿಕೆ
- ಕರ್ನಾಟಕ ಜ್ಯುವೆಲರಿ ಅಸೋಸಿಯೇಷನ್
- ಆಟೋ ಚಾಲಕರ ಸಂಘಟನೆಗಳು
- ಬಿಎಂಟಿಸಿ ಬಸ್ ಚಾಲಕರ ಮತ್ತು ನೌಕರರ ಸಂಘ
- ಓಲಾ, ಉಬರ್, ಏರ್‌ಪೋರ್ಟ್ ಟ್ಯಾಕ್ಸಿಗಳ ಒಕ್ಕೂಟ
- ಖಾಸಗಿ ಶಾಲೆಗಳ ಆಡಳಿತ ಮಂಡಳಿಗಳ ಒಕ್ಕೂಟ
ಇದನ್ನೂ ಓದಿ: 230 ವಾಣಿಜ್ಯ ತೆರಿಗೆ ನಿರೀಕ್ಷಕ ಹುದ್ದೆಗಳಿಗೆ ಅರ್ಜಿ ಅಹ್ವಾನ; ಸೆಪ್ಟೆಂಬರ್ 30 ಕೊನೆ ದಿನ
Bengaluru Bandh: ಏನಿರುತ್ತೆ, ಏನಿರಲ್ಲ?
- ಏನಿರುತ್ತೆ: ಮೆಟ್ರೋ, BMTC- KSRTC, ದಿನಸಿ, ತರಕಾರಿ ಅಂಗಡಿ, ಆಸ್ಪತ್ರೆಗಳು & ಆರೋಗ್ಯ ಸೇವೆಗಳು, ಮೆಡಿಕಲ್ ಶಾಪ್, ಆಸ್ಪತ್ರೆ, ಹೋಟೆಲ್, ಹಾಪ್‍ಕಾಮ್ಸ್, ಓಲಾ, ಉಬರ್ & ಆಟೋ ಸೇವೆ.
- ಏನಿರಲ್ಲ: ಶಾಲಾ-ಕಾಲೇಜು, ಖಾಸಗಿ ಸಾರಿಗೆ, APMC, ಚಿತ್ರಮಂದಿರಗಳು, ಮಾಲ್ ಮತ್ತು ಮಲ್ಟಿಪ್ಲೆಕ್ಸ್‌ಗಳು, ಆಭರಣ ಮಳಿಗೆಗಳು, ಇತ್ಯಾದಿ
ಇಂದು ನಡೆಯಬೇಕಿದ್ದ ಕಾನೂನು ವಿವಿ ಪರೀಕ್ಷೆಗಳು ಮುಂದೂಡಿಕೆ
ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವುದನ್ನು ಖಂಡಿಸಿ ಇಂದು ಬೆಂಗಳೂರು ಬಂದ್‌ಗೆ ಕರೆ ನೀಡಲಾಗಿದ್ದು, ನಗರದಲ್ಲಿ ಸಂಚಾರದಲ್ಲಿ ಅಸ್ತವ್ಯಸ್ಥವಾಗಲಿದೆ. ಹೀಗಾಗಿ ಇಂದು ನಡೆಯಬೇಕಿದ್ದ ಕಾನೂನು ವಿಶ್ವವಿದ್ಯಾನಿಲಯದ ಪರೀಕ್ಷೆಗಳು ಮುಂದೂಡಿಕೆಯಾಗಿದೆ. ಕಾನೂನು ವಿಶ್ವವಿದ್ಯಾಲಯದ ಇಂದಿನ ಎಲ್ಲಾ ಪರೀಕ್ಷೆಗಳನ್ನು ಅಕ್ಟೋಬರ್ 8ಕ್ಕೆ ಮುಂದೂಡಿಕೆ ಮಾಡಿ ಕರ್ನಾಟಕ ರಾಜ್ಯ ಕಾನೂನು ವಿವಿ ಮೌಲ್ಯಮಾಪನ ಕುಲಸಚಿವರು ಆದೇಶ ಹೊರಡಿಸಿದ್ದಾರೆ. ಉಳಿದ ಪರೀಕ್ಷೆಗಳು ಯಥಾ ರೀತಿ ನಡೆಯಲಿವೆ.
ಇದನ್ನೂ ಓದಿ: ಆರೋಗ್ಯವೇ ಭಾಗ್ಯ, ಕೇಸರಿ ನೀರಿನ ಅದ್ಬುತ ಪ್ರಯೋಜನಗಳು
ಶಾಲೆಗಳಿಗೆ ಇಂದು ರಜೆ ಘೋಷಣೆ
ಕರ್ನಾಟಕದಲ್ಲಿ ಕಾವೇರಿ ಕಿಚ್ಚು ದಿನೇ ದಿನೇ ಹೆಚ್ಚುತ್ತಲೇ ಇದೆ. ತಮಿಳುನಾಡಿಗೆ ಕಾವೇರಿ ನೀರು ಹಿರಿಸುತ್ತಿರುವುದನ್ನು ವಿರೋಧಿಸಿ ವಿವಿಧ ಸಂಘಟನೆಗಳು ಸೆ.26 ರಂದು ಬೆಂಗಳೂರು ಬಂದ್‌ಗೆ ಕರೆ ನೀಡಿವೆ. ಹಾಗಾಗಿ ಬೆಂಗಳೂರು ನಗರದ ಎಲ್ಲಾ ಶಾಲೆಗಳಿಗೆ ಇಂದು ರಜೆ ಘೋಷಿಸಲಾಗಿದೆ. ಮಕ್ಕಳ ಸುರಕ್ಷತೆ, ರಕ್ಷಣೆ ದೃಷ್ಟಿಯಿಂದ ರಜೆ ಘೋಷಿಸಿ ಬೆಂಗಳೂರು ನಗರ ಜಿಲ್ಲಾಧಿಕಾರಿ ದಯಾನಂದ್ ಆದೇಶ ಹೊರಡಿಸಿದ್ದಾರೆ.
ಪ್ರಮುಖ ಲಿಂಕುಗಳು/ Important links
ವಾಟ್ಸಾಪ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ಫೇಸ್ ಬುಕ್ ಪೇಜ್ | ಇಲ್ಲಿ ಕ್ಲಿಕ್ ಮಾಡಿ |
ಟೆಲಿಗ್ರಾಮ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ಟ್ವಿಟ್ಟರ್ | ಇಲ್ಲಿ ಕ್ಲಿಕ್ಮಾಡಿ |
ಶೇರ್ ಚಾಟ್ | ಇಲ್ಲಿಕ್ಲಿಕ್ಮಾಡಿ |