ಬೆಂಗಳೂರು: 2 ದಿನಗಳ ಪ್ರವಾಸಕ್ಕೆಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಇಂದು ರಾಜ್ಯಕ್ಕೆ ಆಗಮಿಸುತ್ತಿದ್ದು, ಸಂಜೆ ಅವರ ನೇತೃತ್ವದಲ್ಲಿ ರಾಜ್ಯ ಬಿಜೆಪಿಯ ಕೋರ್ ಕಮಿಟಿ ಸಭೆ ನಡೆಯಲಿದೆ. ಸಭೆಯಲ್ಲಿ ಪಕ್ಷದ ಸಂಘಟನೆ & ಮುಂಬರುವ ಜಿ.ಪಂ., ತಾ.ಪಂ.ಚುನಾವಣೆ ಬಗ್ಗೆ ಚರ್ಚೆಯಾಗಲಿದೆ. ಈ ವೇಳೆ ರಾಜ್ಯ ಉಸ್ತುವಾರಿ ಅರುಣ್ ಸಿಂಗ್, ಸಿಎಂ ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಕೇಂದ್ರ ಸಚಿವ ಡಿ.ವಿ ಸದಾನಂದಗೌಡ, ಪ್ರಹ್ಲಾದ್ ಜೋಶಿ, ಡಿಸಿಎಂ ಗೋವಿಂದ ಕಾರಜೋಳ ಅನೇಕರು ಭಾಗಿಯಾಗಲಿದ್ದಾರೆ.
ಇಂದು ಮದ್ಯಾನ ಭದ್ರಾವತಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಆಗಮನ:
ಇಂದು ಶಿವಮೊಗ್ಗ ಜಿಲ್ಲೆಯ ಭದ್ರಾವತಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಬರುತ್ತಿದ್ದು ಭದ್ರಾವತಿ ಬೈಪಾಸ್ ಬಳಿಯ ಬುಳ್ಳಾಪುರದ ಆರ್.ಎಎಫ್ ಕೇಂದ್ರದ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಸಿಆರ್ಪಿಎಫ್ ನ ಅಧೀನ ಅಂಗ ಸಂಸ್ಥೆಯಾದ ಆರ್ ಎಎಫ್ ಕೇಂದ್ರದ ಶಂಕುಸ್ಥಾಪನೆಗೆ ಬೃಹತ್ ವೇದಿಕೆ ನಿರ್ಮಿಸಲಾಗಿದೆ. ವೇದಿಕೆ ಕಾರ್ಯಕ್ರಮ ಮುಗಿಸಿ ಸಂಜೆ ಬೆಂಗಳೂರಿನ ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ. ಶಾ ಅವರಿಗೆ ಸಿಎಂ ಯಡಿಯೂರಪ್ಪ, ಪ್ರಹ್ಲಾದ್ ಜೋಶಿ, ಸಚಿವ ಬೊಮ್ಮಾಯಿ ಸಾಥ್ ನೀಡಲಿದ್ದಾರೆ.