Government holiday : ಮಾಜಿ ಪ್ರಧಾನಿ ಮನಮೋಹನ್ ಸಿಂಗ್ (Manmohan Singh) ತಮ್ಮ 92ನೇ ವಯಸ್ಸಿನಲ್ಲಿ ವಯೋಸಹಜ ಕಾಯಿಲೆಯಿಂದ ಮೃತಪಟ್ಟಿದ್ದಾರೆ.
ಅವರ ಆರೋಗ್ಯದಲ್ಲಿ ದಿಡೀರ್ ಏರುಪೇರಾಗಿದ್ದು, ಚಿಕಿತ್ಸೆಗಾಗಿ ದೆಹಲಿಯ ಏಮ್ಸ್ (Delhi Aims) ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಮನಮೋಹನ್ ಸಿಂಗ್ ಅವರು ನಿನ್ನೆ ನಿಧನರಾಗಿದ್ದಾರೆ.
ಇದನ್ನೂ ಓದಿ: BIG BREAKING | ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ವಿಧಿವಶ
ಇನ್ನು, ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅವರ ನಿಧನದ ಹಿನ್ನಲೆಯಲ್ಲಿ ರಾಜ್ಯದಲ್ಲಿ ಒಂದು ವಾರದ ಕಾಲ ಶೋಕಾಚರಣೆ ಮಾಡಲಾಗುತ್ತಿದ್ದು ಅದರಂತೆ ಶುಕ್ರವಾರ (ಇಂದು) ಸರ್ಕಾರಿ ರಜೆಯನ್ನು (Government Holiday) ಘೋಷಣೆ ಮಾಡಲಾಗಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದ್ದಾರೆ.
ಹೀಗಾಗಿ, ಶುಕ್ರವಾರ ಆಯೋಜಿಸಲು ಉದ್ದೇಶಿಸಲಾಗಿದ್ದ ಎಲ್ಲ ಸರ್ಕಾರಿ ಕಾರ್ಯಕ್ರಮಗಳನ್ನು ರದ್ದುಗೊಳಿಸಲಾಗಿದೆ. ಬೆಳಗಾವಿಯಲ್ಲಿ ಇಂದು ನಡೆಯಬೇಕಾದ ಜೈ ಬಾಪು, ಜೈ ಭೀಮ್, ಜೈ ಸಂವಿಧಾನ ಸಮಾವೇಶ ಕೂಡ ರದ್ದು ಮಾಡಲಾಗಿದೆ ಎಂದು ತಿಳಿಸಿದ್ದಾರೆ. ಸರ್ಕಾರಿ ರಜೆ ಘೋಷಣೆ ಹಿನ್ನಲೆ ರಾಜ್ಯಾದ್ಯಂತ ಶಾಲಾ-ಕಾಲೇಜುಗಳಿಗೂ (School-College Holiday) ರಜೆಯಿರಲಿದೆ.