ಶಿವಮೊಗ್ಗ: ರಾಜ್ಯಾದ್ಯಂತ ಹಿಜಾಬ್ ಮತ್ತು ಕೇಸರಿ ಶಾಲು ವಿವಾದ ತಾರಕಕ್ಕೇರಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ಶಿವಮೊಗ್ಗ ಜಿಲ್ಲೆಯಲ್ಲಿ 3 ಕಾಲೇಜುಗಳಿಗೆ ಇಂದು ರಜೆ ಘೋಷಿಸಲಾಗಿದೆ.
ಹೌದು, ಈ ಬಗ್ಗೆ ಶಿವಮೊಗ್ಗ ಜಿಲ್ಲಾಧಿಕಾರಿ ಡಾ.ಆರ್.ಸೇಲ್ವಮಣಿ ಆದೇಶ ಅವರು ಹೋರಾಡಿಸಿದ್ದು, ಶಿವಮೊಗ್ಗದ ಬಾಪೂಜಿ ನಗರದ ಪ್ರಥಮ ದರ್ಜೆ ಕಾಲೇಜು, ಬಿ.ಹೆಚ್.ರಸ್ತೆಯ ಸರ್ಕಾರಿ ಪದವಿ ಪೂರ್ವ ಕಾಲೇಜು ಮತ್ತು ಸಾಗರದ ಪದವಿ ಪೂರ್ವ ಕಾಲೇಜಿಗೆ ರಜೆ ನೀಡಲಾಗಿದೆ.
ಇನ್ನು, ಶಿವಮೊಗ್ಗದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿಗಳು ಕಾಲೇಜಿನ ದ್ವಜಸ್ತಂಭಕ್ಕೆ ಕೇಸರಿ ದ್ವಜವನ್ನು ಹಾರಿಸಿದ್ದರು.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.