Holidays: ಫೆಂಗಲ್ ಚಂಡಮಾರುತದ ಪರಿಣಾಮ ಜಿಟಿ ಜಿಟಿ ಮಳೆಯಾಗುತ್ತಿದ್ದು, ವಿಪರೀತ ಚಳಿ ಇರುವ ಹಿನ್ನೆಲೆಯಲ್ಲಿ ಇಂದು ಚಿಕ್ಕಬಳ್ಳಾಪುರ ಮತ್ತು ಕೋಲಾರ ಜಿಲ್ಲೆಯ ಶಾಲಾ, ಕಾಲೇಜುಗಳಿಗೆ ಇಂದು ಒಂದು ದಿನ ರಜೆ ಘೋಷಣೆ ಮಾಡಲಾಗಿದೆ. ಆಯಾ ಜಿಲ್ಲೆಗಳ ಜಿಲ್ಲಾಧಿಕಾರಿಗಳು ರಜೆ ಘೋಷಣೆ ಮಾಡಿ ಆದೇಶ ಹೊರಡಿಸಿದ್ದಾರೆ.
ಹೌದು, ಮಕ್ಕಳ ಆರೋಗ್ಯದ ಹಿತ ದೃಷ್ಟಿಯಿಂದ ಮುಂಜಾಗ್ರತಾ ಕ್ರಮವಾಗಿ ರಜೆ ನೀಡಲಾಗಿದ್ದು, ಈ ರಜೆಯನ್ನು ಮುಂದಿನ ದಿನಗಳ ಯಾವುದಾದರೂ ರಜೆಯ ದಿನ ತರಗತಿ ನಡೆಸುವ ಮೂಲಕ ಸರಿದೂಗಿಸಲು ಸೂಚಿಸಲಾಗಿದೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.