Holiday : ಮಂಡ್ಯದಲ್ಲಿ ನಡೆಯುತ್ತಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ (Kannada Sahitya Sammelana) ನಿನ್ನೆ ಅದ್ದೂರಿ ಚಾಲನೆ ಸಿಕ್ಕಿದ್ದು, ಇಂದು ಕೂಡ ಮಂಡ್ಯ ಜಿಲ್ಲೆಯ ಪ್ರಾಥಮಿಕ, ಪ್ರೌಢಶಾಲೆ ಮತ್ತು ಪದವಿಪೂರ್ವ ಕಾಲೇಜುಗಳಿಗೆ (schools and colleges) ಇಂದು ಸಹ ರಜೆ (Holiday) ಘೋಷಣೆ ಮಾಡಲಾಗಿದೆ.
ಹೌದು, 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಸಿಎಂ ಸಿದ್ದರಾಮಯ್ಯ ಅವರು ಸಮ್ಮೇಳನಕ್ಕೆ ಚಾಲನೆ ನೀಡಿದ್ದಾರೆ. ಕನ್ನಡ ಸಾಹಿತ್ಯ ಸಮ್ಮೇಳನ ಕಾರ್ಯಕ್ರಮ 2ನೇ ದಿನವಾದ ಇಂದು ಕೂಡ ನಡೆಯಲಿದ್ದು, ಹೀಗಾಗಿ ಮಂಡ್ಯ ಜಿಲ್ಲೆಯ ಪ್ರಾಥಮಿಕ, ಪ್ರೌಢಶಾಲೆ ಮತ್ತು ಪದವಿಪೂರ್ವ ಕಾಲೇಜುಗಳಿಗೆ ಇಂದು ಸಹ ರಜೆ ಘೋಷಣೆ ಮಾಡಲಾಗಿದೆ. ಮುಂದಿನ ಸರ್ಕಾರಿ ರಜಾ ದಿನಗಳಂದು ತರಗತಿಯನ್ನು ಸರಿದೂಗಿಸುವಂತೆ ಮಂಡ್ಯ ಜಿಲ್ಲಾಧಿಕಾರಿ ಡಾ. ಕುಮಾರ್ ಸೂಚನೆ ನೀಡಿದ್ದಾರೆ.
ಇದನ್ನೂ ಓದಿ: Holiday | 87ನೇ ಕನ್ನಡ ಸಾಹಿತ್ಯ ಸಮ್ಮೇಳನ; ಇಂದು ಮಂಡ್ಯ ಜಿಲ್ಲೆಯ ಶಾಲಾ, ಕಾಲೇಜುಗಳಿಗೆ ರಜೆ
ಜಿಲ್ಲೆಯ ಸಮಸ್ತ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಸಮ್ಮೇಳನ ಕಾರ್ಯಕ್ರಮದಲ್ಲಿ ಭಾಗವಹಿಸುವ ಮೂಲಕ ಸಮ್ಮೇಳನವನ್ನು ಯಶಸ್ವಿಗೊಳಿಸಬೇಕಾಗಿರುತ್ತದೆ. ಆದ್ದರಿಂದ 2 ದಿನ ಜಿಲ್ಲೆಯ ಎಲ್ಲಾ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ರಜೆ ಘೋಷಿಸಿದ್ದಾರೆ. ಅಕ್ಷರ ಜಾತ್ರೆಯಲ್ಲಿ ವಿದ್ಯಾರ್ಥಿಗಳು, ಶಿಕ್ಷಕರು, ಉಪನ್ಯಾಸಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದಾರೆ.