ಇಂದು ಹೈದರಾಬಾದ್-ಕರ್ನಾಟಕ ವಿಮೋಚನಾ ದಿನ; ಕಲ್ಯಾಣ ಕರ್ನಾಟಕ ಅಮೃತ ಮಹೋತ್ಸವಕ್ಕೆ CM ಚಾಲನೆ

ಹೈದರಾಬಾದ್-ಕರ್ನಾಟಕ ವಿಮೋಚನಾ ದಿನವನ್ನು ಕಲ್ಯಾಣ ಕರ್ನಾಟಕ ವಿಮೋಚನಾ ದಿನ ಎನ್ನಲಾಗುತ್ತದೆ. ಈ ದಿನವನ್ನು ಬೀದರ್, ಕಲಬುರಗಿ, ವಿಜಯನಗರ, ಯಾದಗಿರಿ, ರಾಯಚೂರು, ಬಳ್ಳಾರಿ ಮತ್ತು ಕೊಪ್ಪಳ ಜಿಲ್ಲೆಗಳಲ್ಲಿ ಆಚರಿಸಲಾಗುತ್ತದೆ. ಭಾರತಕ್ಕೆ ಸ್ವಾತಂತ್ರ್ಯ ಸಿಕ್ಕರೂ ಹೈದರಾಬಾದ್ ಸಾಮ್ರಾಜ್ಯದಿಂದ…

Kalyan Karnataka vijayaprabha news

ಹೈದರಾಬಾದ್-ಕರ್ನಾಟಕ ವಿಮೋಚನಾ ದಿನವನ್ನು ಕಲ್ಯಾಣ ಕರ್ನಾಟಕ ವಿಮೋಚನಾ ದಿನ ಎನ್ನಲಾಗುತ್ತದೆ. ಈ ದಿನವನ್ನು ಬೀದರ್, ಕಲಬುರಗಿ, ವಿಜಯನಗರ, ಯಾದಗಿರಿ, ರಾಯಚೂರು, ಬಳ್ಳಾರಿ ಮತ್ತು ಕೊಪ್ಪಳ ಜಿಲ್ಲೆಗಳಲ್ಲಿ ಆಚರಿಸಲಾಗುತ್ತದೆ.

ಭಾರತಕ್ಕೆ ಸ್ವಾತಂತ್ರ್ಯ ಸಿಕ್ಕರೂ ಹೈದರಾಬಾದ್ ಸಾಮ್ರಾಜ್ಯದಿಂದ ಈ ಜಿಲ್ಲೆಗಳಿಗೆ ವಿಮುಕ್ತಿ ಸಿಕ್ಕಿರಲಿಲ್ಲ. ಹಾಗಾಗಿ ಭಾರತೀಯ ಸೇನೆಯು ಹೈದರಾಬಾದ್ ಮೇಲೆ ಆಕ್ರಮಣ ಮಾಡಿ ವಶಕ್ಕೆ ಪಡೆದುಕೊಂಡಿತು. ಇದರೊಂದಿಗೆ ರಾಜ್ಯದ ಈ ಭಾಗಗಳೂ ಕೂಡ ಸ್ವತಂತ್ರಗೊಂಡವು.

ಕಲ್ಯಾಣ ಕರ್ನಾಟಕ ಅಮೃತ ಮಹೋತ್ಸವಕ್ಕೆ CM ಚಾಲನೆ

Vijayaprabha Mobile App free

CM Basavaraj Bommai

ಹೈದಾರಾಬಾದಿನ ನಿಜಾಮರ ಕಪಿಮುಷ್ಠಿಯಿಂದ ಮುಕ್ತಿ ಪಡೆದು 75 ವರ್ಷ ಕಳೆದ ಹಿನ್ನೆಲೆ ಕಲ್ಯಾಣ ಕರ್ನಾಟಕದಲ್ಲಿ ಇಂದು ಅಮೃತ ಮಹೋತ್ಸವ ನಡೆಯಲಿದೆ.

ಕಲಬುರಗಿಯಲ್ಲಿ ಸಿಎಂ ಬೊಮ್ಮಾಯಿ ವಿಮೋಚನಾ ರೂವಾರಿ ಸರ್ಧಾರ್ ವಲ್ಲಭ್ ಭಾಯ್ ಪಟೇಲ್ ಪುತ್ಥಳಿಗೆ ಮಾಲಾರ್ಪಣೆ ಮಾಡಿ, ಜಿಲ್ಲಾ ಪೊಲೀಸ್ ಪೆರೇಡ್ ಮೈದಾನದಲ್ಲಿ ಧ್ವಜಾರೋಹಣ ನೆರವೇರಿಸಲಿದ್ದಾರೆ. ಬೆಳಗ್ಗೆ 11.30ಕ್ಕೆ ಎನ್.ವಿ.ಮೈದಾನದಲ್ಲಿ ಅಮೃತ ಮಹೋತ್ಸವ ಸಮಾರಂಭ ನಡೆಯಲಿದೆ. ಈ ವೇಳೆ ಸಿಎಂ ಹಲವು ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಲಿದ್ದಾರೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.