ಇಂದು (ಭಾನುವಾರ) ಕ್ವೀನ್ಸ್ ಪಾರ್ಕ್ ಓವಲ್‌ನಲ್ಲಿ ನಡೆಯಲಿರುವ ಎರಡನೇ ಏಕದಿನ ಪಂದ್ಯದಲ್ಲಿ ಭಾರತ ತಂಡ ವೆಸ್ಟ್ ಇಂಡೀಸ್ ತಂಡವನ್ನು ಎದುರಿಸಲಿದ್ದು, ಮೊದಲ ಪಂದ್ಯದಲ್ಲಿ ಗೆದ್ದ ಟೀಂ ಇಂಡಿಯಾ ಮತ್ತೊಮ್ಮೆ ಗೆಲ್ಲುವ ತವಕದಲ್ಲಿದೆ.
ಮೊದಲ ಪಂದ್ಯದಲ್ಲಿ ಮೂರು ರನ್‌ಗಳ ರೋಚಕ ಗೆಲುವನ್ನು ಧವನ್ ಬಳಗ ಕಂಡಿದ್ದು, ಮೂರು ಏಕದಿನ ಸರಣಿಯಲ್ಲಿ ಭಾರತ ಈಗಾಗಲೇ 1-0 ಮುನ್ನಡೆ ಸಾಧಿಸಿದೆ. ಈ ಬಾರಿ ಮಧ್ಯಮ ಕ್ರಮಾಂಕದ ಬ್ಯಾಟಿಂಗ್ ಸುಧಾರಿಸಿಕೊಂಡು, ಸಂಘಟಿತ ಹೋರಾಟ ನಡೆಸುವ ನಿಟ್ಟಿನಲ್ಲಿ ಯೋಚಿಸುತ್ತಿದೆ.
ಈ ಮೊದಲೇ ಬಾಂಗ್ಲಾ ವಿರುದ್ಧದ ಸರಣಿಯಲ್ಲಿ ಸೋತಿದ್ದ ವಿಂಡೀಸ್ ಈಗ ಭಾರತದ ವಿರುದ್ಧ ಗೆಲ್ಲುವ ಅನಿವಾರ್ಯತೆಯಲ್ಲಿದ್ದು, ಆದರೆ ವೆಸ್ಟ್ ಇಂಡೀಸ್ ತಂಡ ತವರು ನೆಲದಲ್ಲಿ ಆಡುತ್ತಿರುವುದರಿಂದ ಅವರನ್ನು ಕಡೆಗಣಿಸುವಂತಿಲ್ಲ. ಸಂಜೆ 7 ಗಂಟೆಗೆ ಆರಂಭವಾಗಲಿರುವ ಈ ಪಂದ್ಯ ರೋಚಕತೆಯಿಂದ ಕೂಡಿರಲಿದೆ.
ತಂಡಗಳ ಸಂಭಾವ್ಯ ಪಟ್ಟಿ ಹೀಗಿದೆ :
ವೆಸ್ಟ್ ಇಂಡೀಸ್ ತಂಡ: ಶಾಯ್ ಹೋಪ್ (ವಿಕೆಟ್ ಕೀಪರ್), ಬ್ರ್ಯಾಂಡನ್ ಕಿಂಗ್, ಶಮರ್ ಬ್ರೂಕ್ಸ್, ಕೈಲ್ ಮೇಯರ್ಸ್, ನಿಕೋಲಸ್ ಪೂರನ್ (ನಾಯಕ), ರೋವ್ಮನ್ ಪೊವೆಲ್, ಅಕೆಲ್ ಹೊಸೈನ್, ರೊಮಾರಿಯೋ ಶೆಫರ್ಡ್, ಅಲ್ಜಾರಿ ಜೋಸೆಫ್, ಗುಡಕೇಶ್ ಮೋಟಿ, ಜೇಡನ್ ಸೀಲ್ಸ್, ಕೀಮೋ ಪಾಲ್, ಕೀಸಿ ಕಾರ್ಟಿ
ಭಾರತ ತಂಡ: ಶಿಖರ್ ಧವನ್ (ನಾಯಕ), ಶುಬ್ಮನ್ ಗಿಲ್, ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ದೀಪಕ್ ಹೂಡಾ, ಅಕ್ಸರ್ ಪಟೇಲ್, ಶಾರ್ದೂಲ್ ಠಾಕೂರ್, ಮೊಹಮ್ಮದ್ ಸಿರಾಜ್, ಯುಜ್ವೇಂದ್ರ ಚಾಹಲ್, ಪ್ರಸಿದ್ಧ್ ಕೃಷ್ಣ, ರುತುರಾಜ್ ಗಾಯಕ್ವಾಡ್, ಇಶಾನ್ ಕಿಶನ್, ಅವೆಶ್ ಖಾನ್ , ಅರ್ಷದೀಪ್ ಸಿಂಗ್




