ಇಂದು ಆಸ್ಟ್ರೇಲಿಯಾ ಮತ್ತು ಟೀಮ್ ಇಂಡಿಯಾ ನಡುವೆ ಮೊದಲ ಟಿ 20 ಪಂದ್ಯ; ಗೆಲುವು ಯಾರಿಗೆ?

india vs australia first t20 vijayaprabha india vs australia first t20 vijayaprabha

ಕ್ಯಾನ್‌ಬೆರಾ: ಆಸ್ಟ್ರೇಲಿಯಾ ನೆಲದಲ್ಲಿ ಮೂರು ಪಂದ್ಯಗಳ ಏಕದಿನ ಸರಣಿಯನ್ನು 1-2ರಿಂದ ಸೋತಿರುವ ಟೀಮ್ ಇಂಡಿಯಾ, ಶುಕ್ರವಾರದಿಂದ ಮೂರು ಟಿ 20 ಸರಣಿಯಲ್ಲಿ ಪರಸ್ಪರ ಮುಖಾಮುಖಿಯಾಗಲಿವೆ. ಇತ್ತೀಚೆಗೆ ಸಿಡ್ನಿಯಲ್ಲಿ ನಡೆದ ಮೊದಲ ಎರಡು ಏಕದಿನ ಪಂದ್ಯಗಳನ್ನು ಸೋತಿದ್ದ ಟೀಮ್ ಇಂಡಿಯಾ, ಕ್ಯಾನ್‌ಬೆರಾದಲ್ಲಿ ಬುಧವಾರ ನಡೆದ ಕೊನೆಯ ಏಕದಿನ ಪಂದ್ಯವನ್ನು 13 ರನ್‌ಗಳಿಂದ ಗೆಲವು ಸಾಧಿಸಿತ್ತು.

ಇನ್ನು ಕೊನೆಯ ಏಕದಿನ ಪಂದ್ಯವನ್ನು ಅದೇ ಗ್ರೌಂಡ್ ನಲ್ಲಿ ಇಂದು ಮೊದಲ ಟಿ 20 ಪಂದ್ಯವನ್ನು ಆಡುತ್ತಿದ್ದು ಭಾರತಕ್ಕೆ ಒಂದು ಪ್ರಮುಖ ಅಂಶವಾಗಿದೆ. ಪಂದ್ಯವು ಭಾರತೀಯ ಕಾಲಮಾನ ಮಧ್ಯಾಹ್ನ 1.40 ಕ್ಕೆ ಪ್ರಾರಂಭವಾಗಲಿದೆ.

ಭಾರತೀಯ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ ಉತ್ತಮ ಫಾರ್ಮ್ ನಲ್ಲಿದ್ದರೆ, ಪವರ್ ಹಿಟ್ಟರ್ ಹಾರ್ದಿಕ್ ಪಾಂಡ್ಯ ಮತ್ತು ಆಲ್‌ರೌಂಡರ್ ರವೀಂದ್ರ ಜಡೇಜಾ ಕೂಡ ಉತ್ತಮ ಫಾರ್ಮ್ ನಲ್ಲಿದ್ದಾರೆ. ಆದರೆ, ಆರಂಭಿಕ ಆಟಗಾರ ಶಿಖರ್ ಧವನ್ ಅವರ ಅಸ್ಥಿರತೆಯು ಭಾರತವ ತಂಡವನ್ನು ಕಾಡುತ್ತಿದ್ದು, ಶ್ರೇಯಸ್ ಅಯ್ಯರ್ ಕಳಪೆ ಫಾರ್ಮ್ ಕೂಡ ತಲೆನೋವಾಗಿದೆ. ಇನ್ನು ಏಕದಿನ ಪಂದ್ಯಗಳಲ್ಲಿ ಮಧ್ಯಮ ಕ್ರಮಾಂಕದಲ್ಲಿ ಬ್ಯಾಟ್ ಬೀಸಿದ ಕೆ.ಎಲ್.ರಾಹುಲ್ ಓಪನರ್ ಆಗಿ ಕಣಕ್ಕಿಳಿಯಲಿದ್ದಾರೆ.

Advertisement

ಇನ್ನು ಎದುರಾಳಿ ತಂಡ ಆಸ್ಟ್ರೇಲಿಯಾವನ್ನು ನೋಡಿದರೆ, ತಂಡದ ನಾಯಕ ಆರನ್ ಫಿಂಚ್ ಸೂಪರ್ ಫಾರ್ಮ್‌ನಲ್ಲಿದ್ದರೆ, ಮಾರ್ಕಸ್ ಲಾಬುಶೆನ್ ಮತ್ತು ಸ್ಟೀವ್ ಸ್ಮಿತ್ ಅವರು ಮಾಧ್ಯಮ ಕ್ರಮಾಂಕದಲ್ಲಿ ಭಾರತವನ್ನು ಕಾಡುವ ಸಾಮರ್ಥ್ಯ ಹೊಂದಿದ್ದಾರೆ. ಇನ್ನು ಸ್ಪೋಟಕ ಬ್ಯಾಟ್ಸಮನ್ ಗ್ಲೆನ್ ಮ್ಯಾಕ್ಸ್‌ವೆಲ್ ಉತ್ತಮ ಫಾರ್ಮ್ನಲ್ಲಿದ್ದು ಅವರನ್ನು ನಿಯಂತ್ರಿಸಲು ಟೀಮ್‌ ಇಂಡಿಯಾ ವಿಫಲವಾಗಿದೆ. ಆರಂಭಿಕ ಆಟಗಾರ ಡೇವಿಡ್ ವಾರ್ನರ್ ಗಾಯದಿಂದಾಗಿ ಟಿ 20 ಸರಣಿಯಿಂದ ಹೊರಗುಳಿದಿದ್ದರೆ, ಆಲ್‌ರೌಂಡರ್ ಮಾರ್ಕಸ್ ಸ್ಟೈನಿಸ್ ಕೂಡ ಗಾಯದಿಂದ ಹೊರಗುಳಿದಿದ್ದಾರೆ.

ಟಿ 20 ಪಂದ್ಯಗಳ ಎರಡು ತಂಡಗಳ ಮುಖಾಮುಖಿ:

ದಾಖಲೆಗಳ ಪ್ರಕಾರ, ಭಾರತ ಮತ್ತು ಆಸ್ಟ್ರೇಲಿಯಾ ಇದುವರೆಗೆ 19 ಟಿ 20 ಪಂದ್ಯಗಳಲ್ಲಿ ಭೇಟಿಯಾಗಿವೆ. ಇದರಲ್ಲಿ 11 ಪಂದ್ಯಗಳಲ್ಲಿ ಟೀಮ್ ಇಂಡಿಯಾ ಜಯಗಳಿಸಿದರೆ, ಉಳಿದ 8 ಪಂದ್ಯಗಳನ್ನು ಆಸ್ಟ್ರೇಲಿಯಾ ಗೆಲುವು ದಾಖಲಿಸಿದೆ.

ತಂಡಗಳ ಸಂಭಾವ್ಯ ಪಟ್ಟಿ:

ಭಾರತ ತಂಡ: ಶಿಖರ್ ಧವನ್, ಕೆ.ಎಲ್. ರಾಹುಲ್ (ಕೀಪರ್), ವಿರಾಟ್ ಕೊಹ್ಲಿ (ನಾಯಕ), ಶ್ರೇಯಸ್ ಅಯ್ಯರ್, ಮನೀಶ್ ಪಾಂಡೆ, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ದೀಪಕ್ ಚಹರ್, ಟಿ ನಟರಾಜನ್, ಜಸ್ಪ್ರೀತ್ ಬುಮ್ರಾ, ಯುಜ್ವೇಂದ್ರ ಚಾಹಲ್, ಮಯಾಂಕ್ ಅಗರ್ವಾನ್, ಸಂಜುವಾನ್ , ವಾಷಿಂಗ್ಟನ್ ಸುಂದರ್, ಮೊಹಮ್ಮದ್ ಶಮಿ.

ಆಸ್ಟ್ರೇಲಿಯಾ ತಂಡ: ಆರನ್ ಫಿಂಚ್ (ನಾಯಕ), ಮ್ಯಾಥ್ಯೂ ವೇಡ್, ಸ್ಟೀವನ್ ಸ್ಮಿತ್, ಗ್ಲೆನ್ ಮ್ಯಾಕ್ಸ್‌ವೆಲ್, ಮೊಯಿಸಸ್ ಹೆನ್ರಿಕ್ಸ್, ಅಲೆಕ್ಸ್ ಕ್ಯಾರಿ (ಕೀಪರ್), ಆಷ್ಟನ್ ಅಗರ್, ಸೀನ್ ಅಬಾಟ್, ಮಿಚೆಲ್ ಸ್ಟಾರ್ಕ್, ಆಡಮ್ ಜಂಪಾ, ಜೋಶ್ ಹ್ಯಾಜೆಲ್‌ವುಡ್, ಆಂಡ್ರ್ಯೂ ಟೈ, ಮಾರ್ನಸ್ ಲ್ಯಾಬುಸ್ಚಾಗ್ನೆ,ಡಿ ಆರ್ಸಿ ಶಾರ್ಟ್, ಕ್ಯಾಮೆರಾನ್ ಗ್ರೀನ್, ಡೇನಿಯಲ್ ಸ್ಯಾಮ್ಸ್, ಮಾರ್ಕಸ್ ಸ್ಟೋಯಿನಿಸ್.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.
Add a comment

Leave a Reply

Your email address will not be published. Required fields are marked *

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement