ಕ್ಯಾನ್ ಬೆರ್ರಾ: ಅತಿಥೇಯ ಆಸ್ಟ್ರೇಲಿಯಾ ಹಾಗೂ ಪ್ರವಾಸಿ ಭಾರತ ತಂಡದ ನಡುವಿನ ಮೂರನೇ ಹಾಗೂ ಕೊನೆಯ ಏಕದಿನ ಪಂದ್ಯ ಕ್ಯಾನ್ ಬೆರ್ರಾದಲ್ಲಿ ನಡೆಯಲಿದ್ದು, ಬೆಳಗ್ಗೆ 9:10ಕ್ಕೆ ಪಂದ್ಯ ಆರಂಭವಾಗಲಿದೆ.
ಈಗಾಗಲೇ ಎರಡು ಪಂದ್ಯಗಳನ್ನು ಗೆದ್ದಿರುವ ಕಾಂಗರೂ ಪಡೆಯು 3-0 ಅಂತರದಿಂದ ಸರಣಿಯನ್ನು ವಶಪಡಿಸಿಕೊಳ್ಳುವ ಛಲದಿಂದ ಮೈದಾನಕ್ಕಿಳಿಯಲಿದ್ದರೆ, ಸರಣಿಯಲ್ಲಿ ಕಮ್ ಬ್ಯಾಕ್ ಮಾಡುವ ಇರಾದೆಯಿಂದ ಟೀಮ್ ಇಂಡಿಯಾ ಕಣಕ್ಕಿಳಿಯಲಿದ್ದು ಸರಣಿ ವೈಟ್ ವಾಷ್ ತಪ್ಪಿಸಿಕೊಳ್ಳಲು ಗೆಲ್ಲಲೇಬೇಕಾದ ಅನಿವಾರ್ಯತೆ ಇದೆ.
ಇಂದಿನ ಪಂದ್ಯದಲ್ಲಿ ಟೀಮ್ ಇಂಡಿಯಾದಲ್ಲಿ ಬದಲಾವಣೆಗಳಾಗುವ ಸಾಧ್ಯತೆಗಳಿವೆ.
ತಂಡದ ಸಂಭಾವ್ಯ ಪಟ್ಟಿ:
ಭಾರತ ತಂಡ: ಮಾಯಾಂಕ್ ಅಗರ್ವಾಲ್, ಶಿಖರ್ ಧವನ್, ವಿರಾಟ್ ಕೊಹ್ಲಿ (ನಾಯಕ), ಶ್ರೇಯಸ್ ಅಯ್ಯರ್, ಕೆ.ಎಲ್ ರಾಹುಲ್ (ಕೀಪರ್), ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ನವದೀಪ್ ಸೈನಿ, ಮಹಮ್ಮದ್ ಶಮಿ, ಜಸ್ಪ್ರೀತ್ ಬುಮ್ರಾ, ಯಜುವೇಂದ್ರ ಚಾಹಲ್, ಶಾರ್ದುಲ್ ಠಾಕೂರ್, ಕುಲದೀಪ್ ಯಾದವ್, ಮನೀಶ್ ಪಾಂಡ್ಯೇ, ಸಂಜು ಸ್ಯಾಮ್ಸನ್, ಟಿ ನಟರಾಜನ್, ಶುಬ್ಮನ್ ಗಿಲ್.
ಆಸ್ಟ್ರೇಲಿಯಾ ತಂಡ: ಆರನ್ ಫಿಂಚ್ (ನಾಯಕ), ಸ್ಟೀವನ್ ಸ್ಮಿತ್, ಮಾರ್ನಸ್ ಲ್ಯಾಬುಸ್ಚಾಗ್ನೆ, ಗ್ಲೆನ್ ಮ್ಯಾಕ್ಸ್‌ವೆಲ್, ಮೊಯಿಸಸ್ ಹೆನ್ರಿಕ್ಸ್, ಅಲೆಕ್ಸ್ ಕ್ಯಾರಿ (ಕೀಪರ್), ಮಿಚೆಲ್ ಸ್ಟಾರ್ಕ್, ಆಡಮ್ ಜಂಪಾ, ಜೋಶ್ ಹೆಜೆಲ್ ವುಡ್, ಮಾರ್ಕಸ್ ಸ್ಟೋನಿಸ್, ಮ್ಯಾಥ್ಯೂ ವೇಡ್, ಸೀನ್ ಅಬಾಟ್, ಆಷ್ಟನ್ ಅಗರ್, ಆಂಡ್ರ್ಯೂ ಟೈ , ಕ್ಯಾಮರೂನ್ ಗ್ರೀನ್, ಡೇನಿಯಲ್ ಸ್ಯಾಮ್ಸ್.