ಇಂದು ಈ ಜಿಲ್ಲೆಗಳಲ್ಲಿ ಚಳಿ ಹೆಚ್ಚಾಗುವ ಜೊತೆಗೆ ಮಳೆ; ಹೀಗಿದೆ ಇಂದಿನ ಹವಾಮಾನ ವರದಿ

ರಾಜ್ಯದಲ್ಲಿ ಚಳಿ ಹೆಚ್ಚಾಗುವ ಜೊತೆಗೆ ಮಳೆಯೂ ಬೀಳುತ್ತಿದ್ದು, ವಾತಾವರಣದಲ್ಲಿನ ಏರುಪೇರಿನಿಂದಾಗಿ ಅಕಾಲಿಕ ಮಳೆ ಸುರಿಯುತ್ತಿದ್ದು, ಇಂದು ಕೂಡ ರಾಜ್ಯದ ಹಲವೆಡೆ ಮಳೆಯಾಗುವ ಸಂಭವವಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹೌದು, ಬೆಂಗಳೂರು, ಮೈಸೂರು,…

rain vijayaprabha news

ರಾಜ್ಯದಲ್ಲಿ ಚಳಿ ಹೆಚ್ಚಾಗುವ ಜೊತೆಗೆ ಮಳೆಯೂ ಬೀಳುತ್ತಿದ್ದು, ವಾತಾವರಣದಲ್ಲಿನ ಏರುಪೇರಿನಿಂದಾಗಿ ಅಕಾಲಿಕ ಮಳೆ ಸುರಿಯುತ್ತಿದ್ದು, ಇಂದು ಕೂಡ ರಾಜ್ಯದ ಹಲವೆಡೆ ಮಳೆಯಾಗುವ ಸಂಭವವಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಹೌದು, ಬೆಂಗಳೂರು, ಮೈಸೂರು, ಶಿವಮೊಗ್ಗ, ಚಿಕ್ಕಮಗಳೂರು, ಕೋಲಾರ, ಕೊಡಗು, ದಾವಣಗೆರೆ, ಚಾಮರಾಜನಗರ, ಮಂಡ್ಯ ಮತ್ತು ಕರಾವಳಿ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದ್ದು, ದಕ್ಷಿಣ ಒಳನಾಡಿನಲ್ಲಿ ಮಳೆ ಬಿದ್ದರೆ, ಉತ್ತರಒಳನಾಡಿನ ಜಿಲ್ಲೆಗಳಲ್ಲಿ ಮಧ್ಯಾಹ್ನದ ವೇಳೆ ಬಿಸಿಲು ಹೆಚ್ಚಾಗಲಿದೆ ಎನ್ನಲಾಗಿದೆ.

ಇನ್ನುಳಿದಂತೆ ಹಲವು ಕಡೆಗಳಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು,ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 27 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 14 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.

Vijayaprabha Mobile App free
WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.