ಅಬುಧಾಬಿ: ಇಂದು ಸಂಜೆ 7.30 ಕ್ಕೆ ಅಬುಧಾಬಿಯ ಶೇಖ್ ಜಾಯೆದ್ ಕ್ರೀಡಾಂಗಣದಲ್ಲಿ ನಡೆಯಲಿರುವ ಐಪಿಎಲ್ 2020 ರ ಐದನೇ ಪಂದ್ಯದಲ್ಲಿ ಕೋಲ್ಕತಾ ನೈಟ್ ರೈಡರ್ಸ್ ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ತಂಡವನ್ನು ಎದುರಿಸಲಿದೆ.
ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡ ಐದು ವಿಕೆಟ್‌ಗಳಿಂದ ಸೋಲು ಅನುಭವಿಸಿತ್ತು. ಮೊದಲು ಆಡಿದ ರೋಹಿತ್ ಶರ್ಮಾ ನೇತೃತ್ವದ ಮುಂಬೈ ಇಂಡಿಯನ್ಸ್ ತಂಡ ಕ್ವಿಂಟನ್ ಡಿ ಕಾಕ್ (33 ರನ್, 20 ಎಸೆತ) ಮತ್ತು ಸೌರಭ್ ತಿವಾರಿ (42 ರನ್, 31ಎಸೆತ) ಅವರ ಸಹಾಯದಿಂದ ಒಟ್ಟು 162 ರನ್ ಗಳಿಸಿದರೆ, ಎಂಎಸ್ ಧೋನಿ ನೇತೃತ್ವದ ಚೆನ್ನೈ ಸೂಪರ್ ಕಿಂಗ್ಸ್ ನಾಲ್ಕು ಎಸೆತಗಳು ಬಾಕಿ ಇರುವಾಗಲೇ ಗೆಲುವಿನ ಗುರಿ ತಲುಪಿತು.
ಮತ್ತೊಂದೆಡೆ, ಇಂಡಿಯನ್ ಪ್ರೀಮಿಯರ್ ಲೀಗ್‌ನ 2020 ಋತುವನಲ್ಲಿ, ದಿನೇಶ್ ಕಾರ್ತಿಕ್ ನೇತೃತ್ವದ ಕೋಲ್ಕತಾ ನೈಟ್ ರೈಡರ್ಸ್ ತಂಡ ತನ್ನ ಮೊದಲ ಪಂದ್ಯವನ್ನು ಮುಂಬೈ ಇಂಡಿಯನ್ಸ್ ವಿರುದ್ಧ ಆಡಲಿದ್ದು, ತಮ್ಮ ಮೊದಲ ಪಂದ್ಯದಲ್ಲಿ ಕೆಕೆಆರ್ ತಂಡ ಹೇಗೆ ಪ್ರದರ್ಶನ ನೀಡುತ್ತದೆ ಮತ್ತು ಮುಂಬೈ ಇಂಡಿಯನ್ಸ್ ತಂಡ ಟೂರ್ನಿಯ ತಮ್ಮ ಮೊದಲ ಜಯವನ್ನು ದಾಖಲಿಸಲು ಸಾಧ್ಯವಾಗುತ್ತದೆಯೇ ಎಂದು ಕಾದು ನೋಡಬೇಕು. ಆದರೆ, ಪಂದ್ಯವನ್ನು ಗೆಲ್ಲುವುದು ಹಲವಾರು ಅಂಶಗಳನ್ನು ಅವಲಂಬಿಸಿದ್ದು, ಹವಾಮಾನ ಮತ್ತು ಪಿಚ್ ನಿರ್ಣಾಯಕ ಪಾತ್ರ ವಹಿಸುತ್ತದೆ.
ತಂಡದ ಬಲಾಬಲ:
ಮುಂಬೈ ಇಂಡಿಯನ್ಸ್ ತಂಡವು ನಾಯಕ ರೋಹಿತ್ ಶರ್ಮ, ಕ್ವಿಂಟನ್ ಡಿ ಕಾಕ್, ಪೊಲಾರ್ಡ್ ಅವರಂತಹ ಬಲಿಷ್ಠ ಬ್ಯಾಟಿಂಗ್, ಹಾರ್ದಿಕ್ ಪಾಂಡ್ಯ, ಕೃಣಾಲ್ ಪಾಂಡ್ಯ ಅವರಂತಹ ಆಲ್ರೌಂಡರ್, ಬುಮ್ರಾ , ಟ್ರೆಂಟ್ ಬೋಲ್ಟ್ ಅವರಂತಹ ಬಲಿಷ್ಠ ಬೌಲಿಂಗ್ ಪಡೆಯನ್ನು ಹೊಂದಿದೆ.
ಕೋಲ್ಕತಾ ನೈಟ್ ರೈಡರ್ಸ್ ತಂಡ ಕೂಡ ಬಲಿಷ್ಠವಾಗಿದ್ದು ನಾಯಕ ದಿನೇಶ್ ಕಾರ್ತಿಕ್, ಸುನಿಲ್ ನರೇನ್, ಆಂಡ್ರೆ ರಸೆಲ್, ಪಾಟ್ ಕಮಿನ್ಸ್ , ಇಯಾನ್ ಮಾರ್ಗನ್ ಅವರಂತಹ ಆಟಗಾರರು ತಂಡದಲ್ಲಿದ್ದಾರೆ.
ಹವಾಮಾನ ಮತ್ತು ಪಿಚ್ ರಿಪೋರ್ಟ್:
ಅಬುಧಾಬಿಯಲ್ಲಿ ತಾಪಮಾನವು ಸುಮಾರು 35 ಡಿಗ್ರಿ ಸೆಲ್ಸಿಯಸ್ ಇರುವ ನಿರೀಕ್ಷೆಯಿದ್ದು, ಮಳೆಯಾಗುವ ಸಾಧ್ಯತೆಗಳು ಕಡಿಮೆ. ಶೇಖ್ ಜಾಯೆದ್ ಕ್ರೀಡಾಂಗಣದಲ್ಲಿನ ಪಿಚ್ ಸ್ಪಿನ್ನರ್‌ಗಳು ಮತ್ತು ಸೀಮರ್‌ಗಳಿಗೆ ಸಹಕಾರಿಯಾಗಿದೆ.