SM Krishna funeral : ನಿನ್ನೆ ನಿಧನರಾದ ಮಾಜಿ ಸಿಎಂ SM ಕೃಷ್ಣ ಅವರ ಹುಟ್ಟೂರಾದ ಮಂಡ್ಯ ಜಿಲ್ಲೆಯ ಮದ್ದೂರಿನಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಲಿದೆ.
ಇದನ್ನೂ ಓದಿ: SM Krishna passes away | ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ವಿಧಿವಶ
ಇಂದು ಬೆಳಗ್ಗೆ 8ಕ್ಕೆ ಕೃಷ್ಣ ಅವರ ಪಾರ್ಥಿವ ಶರೀರವನ್ನು ಸದಾಶಿವನಗರದ ಸ್ವಗೃಹದಿಂದ ಅವರ ಹುಟ್ಟೂರಾದ ಮಂಡ್ಯ ಜಿಲ್ಲೆಯ ಸೋಮನಹಳ್ಳಿಗೆ ಕೊಂಡೊಯ್ಯಲಾಗುವುದು. ಬೆಳಗ್ಗೆ 10:30ಕ್ಕೆ ಮದ್ದೂರಿಗೆ ಪಾರ್ಥಿವ ಶರೀರ ತಲುಪಲಿದ್ದು, ಮೃತರ ಸ್ವಗ್ರಾಮ ಸೋಮನಹಳ್ಳಿಯಲ್ಲಿ ಅಂತಿಮ ದರ್ಶನಕ್ಕೆ ಮಧ್ಯಾಹ್ನ 3 ಗಂಟೆಯವರೆಗೆ ಅವಕಾಶ ಕಲ್ಪಿಸಲಾಗುತ್ತದೆ.
ನಂತರ ತೆರೆದ ವಾಹನದ ಮೂಲಕ ಹೊರಡಲಿರೋ SM ಕೃಷ್ಣ ಅಂತಿಮ ಮೆರವಣಿಗೆಯಲ್ಲಿ ಅಲ್ಲಲ್ಲಿ ಸಾರ್ವಜನಿಕರ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ಸಕಲ ಸರ್ಕಾರಿ ಗೌರವದೊಂದಿಗೆ ಅಂತ್ಯಕ್ರಿಯೆ ನೆರವೇರಲಿದೆ.
ಇದನ್ನೂ ಓದಿ: S M Krishna | ಅಪರೂಪದ ವರ್ಣರಂಜಿತ ರಾಜಕಾರಣಿ ಎಸ್.ಎಂ. ಕೃಷ್ಣರ ಹಿನ್ನಲೆ, ರಾಜಕೀಯ ಹಾದಿ